ರಾಜ್ಯ

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

ಕಗ್ಗದಾಸಪುರ ಮುಖ್ಯ ರಸ್ತೆಯ ವಿಜ್ಞಾನ ನಗರ ಸಿಗ್ನಲ್‌ನಲ್ಲಿ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ.

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video
ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ
Published On :

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಿಗ್ನಲ್‌ಗಾಗಿ ಕಾಯುತ್ತಿದ್ದ ಬೈಕಿಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ 33 ವರ್ಷದ ಕೇಶ ವಿನ್ಯಾಸಕ ನವೀನ್ ಅವರು ಮೃತಪಟ್ಟಿದ್ದಾರೆ.

ಕಗ್ಗದಾಸಪುರ ಮುಖ್ಯ ರಸ್ತೆಯ ವಿಜ್ಞಾನ ನಗರ ಸಿಗ್ನಲ್‌ನಲ್ಲಿ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ.

ನಿಯಮ ಪಾಲಿಸಿ ಸಿಗ್ನಲ್ ಬಳಿ ನಿಂತಿದ್ದ ಸವಾರನ ಮೇಲೆ ಹಿಂದಿನಿಂದ ಅತೀ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ, ಸವಾರ ನವೀನ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಸೆಲೂನ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಎಂದಿನಂತೆ ತಮ್ಮ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ವಿಜ್ಞಾನ ನಗರದ ಸಿಗ್ನಲ್ ಬಳಿ ತಲುಪಿದಾಗ ರೆಡ್ ಸಿಗ್ನಲ್ ಕಂಡು ತಮ್ಮ ವಾಹನವನ್ನು ನಿಲ್ಲಿಸಿದ್ದರು.

ಇದೇ ವೇಳೆ, ಹಿಂಬದಿಯಿಂದ ಅತೀ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ಸಿಗ್ನಲ್ ಬಳಿ ಸಾಲಾಗಿ ನಿಂತಿದ್ದ ವಾಹನಗಳ ನಡುವೆ ನುಗ್ಗಿದೆ. ನವೀನ್ ಅವರ ದ್ವಿಚಕ್ರ ವಾಹನಕ್ಕೆ ಕಾರು ರಭಸವಾಗಿ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತೀವ್ರತೆಗೆ ನವೀನ್ ಅವರು ಬೈಕ್‌ನಿಂದ ಸುಮಾರು 50 ಅಡಿ ದೂರಕ್ಕೆ ಹಾರಿ ಬಿದ್ದಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಮತ್ತು ದೇಹದ ವಿವಿಧೆಡೆ ತೀವ್ರ ರಕ್ತಸ್ರಾವವಾಗಿದ್ದರಿಂದ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಜೀವನ್ ಭೀಮಾ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 63 ವರ್ಷದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.