ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!
ಭ್ರಷ್ಟಾಚಾರ ಮತ್ತು ದೊಡ್ಡ ಪ್ರಮಾಣದ ಅಕ್ರಮಗಳ ಆರೋಪಗಳ ಸಂಬಂಧ ರಾಜ್ಯ ಸಚಿವ ಸಂಪುಟ ಸಲಹೆಯ ಮೇರೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು, ಇಂದು ಮತ್ತೆ ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕಾರ್ ಅವರನ್ನು ಅಮಾನತುಗೊಳಿಸಿದ್ದಾರೆ.

ಬೆಂಗಳೂರು: ಭ್ರಷ್ಟಾಚಾರ ಮತ್ತು ದೊಡ್ಡ ಪ್ರಮಾಣದ ಅಕ್ರಮಗಳ ಆರೋಪಗಳ ಸಂಬಂಧ ರಾಜ್ಯ ಸಚಿವ ಸಂಪುಟ ಸಲಹೆಯ ಮೇರೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು, ಇಂದು ಮತ್ತೆ ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕಾರ್ ಅವರನ್ನು ಅಮಾನತುಗೊಳಿಸಿದ್ದಾರೆ.
ಶಿವಶಂಕರಪ್ಪರನ್ನು ಅಮಾನತುಗೊಳಿಸಿರುವುದು ಇದು ಎರಡನೇ ಬಾರಿ. ಜುಲೈ 13ರಂದು ರಾಜ್ಯಪಾಲರು ಸಾಹುಕರ್ ಅವರನ್ನು ಅಮಾನತುಗೊಳಿಸಿದ್ದರು. ಆದರೆ ಕರ್ನಾಟಕ ಹೈಕೋರ್ಟ್ ಈ ಕ್ರಮದಲ್ಲಿ 'ರಾಜ್ಯ ಸಚಿವ ಸಂಪುಟದ ಸಲಹೆ' ಇಲ್ಲ ಎಂಬ ಕಾರಣಕ್ಕೆ ಆದೇಶವನ್ನು ರದ್ದುಗೊಳಿಸಿತು. ಇದರ ಬೆನ್ನಲ್ಲೇ ಆಗಸ್ಟ್ 21ರಂದು ರಾಜ್ಯ ಸಚಿವ ಸಂಪುಟವು ಶಿವಶಂಕರಪ್ಪರನ್ನು ಅಮಾನತುಗೊಳಿಸಲು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು.
ಭಾರತದ ಸಂವಿಧಾನದ 317 (2)ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳ ಮುಂದಿನ ಆದೇಶದವರೆಗೂ ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಾಹುಕಾರ್ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಕೈಗಾರಿಕಾ ವಿಸ್ತರಣಾ ಅಧಿಕಾರಿಗಳಾಗಿ ಅಕ್ರಮವಾಗಿ ಆಯ್ಕೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬ ಆರೋಪದ ನಂತರ ರಾಜ್ಯಪಾಲರು ಅವರನ್ನು ಅಮಾನತುಗೊಳಿಸಿದ್ದಾರೆ. ಪಶುವೈದ್ಯಕೀಯ ವೈದ್ಯರ ನೇಮಕಾತಿಯಲ್ಲಿಯೂ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



