ರಾಜ್ಯ

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಮಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್‌ಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ವಿಚಾರಣಾಧೀನ ಖೈದಿ (ಸರ್ಕಾರಿ ಅಧಿಕಾರಿ) ಮಹಿಳೆ ಜೊತೆ ಸಿಕ್ಕಿ ಬಿದ್ದಿದ್ದಾನೆ. KSLSA ನಡೆಸಿದ ಅನಿರೀಕ್ಷಿತ ತಪಾಸಣೆಯ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!
ಕೆಎಸ್ಎಲ್ಎಸ್ಎ ತಂಡದಿಂದ ದಾಳಿ
Published On :

ಮಂಡ್ಯ: ಮಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್‌ಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ವಿಚಾರಣಾಧೀನ ಖೈದಿ (ಸರ್ಕಾರಿ ಅಧಿಕಾರಿ) ಮಹಿಳೆ ಜೊತೆ ಸಿಕ್ಕಿ ಬಿದ್ದಿದ್ದಾನೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ನಡೆಸಿದ ಅನಿರೀಕ್ಷಿತ ತಪಾಸಣೆಯ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ, ಭ್ರಷ್ಟಾಚಾರ ಪ್ರಕರಣದಲ್ಲಿ ವಿಚಾರಣಾಧೀನರಾಗಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕ (ADLR) ಸರ್ವೆ ಮೇಲ್ವಿಚಾರಕ ಮಹಮದ್ ಹುಸೇನ್ ಆಗಸ್ಟ್ 21ರಿಂದ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಮಿಮ್ಸ್) ಆಸ್ಪತ್ರೆಗೆ ದಾಖಲಾಗಿ ಚಿಕಿಕ್ಸೆ ಪಡೆಯುತ್ತಿದ್ದರು. ಇನ್ನು ನ್ಯಾಯಾಲಯದ ಅನುಮತಿ ಪಡೆಯದೇ, ಅಂತಹ ಚಿಕಿತ್ಸೆಗೆ ಅರ್ಹವಾದ ಯಾವುದೇ ಗಂಭೀರ ಆರೋಗ್ಯ ಸ್ಥಿತಿಯೂ ಇಲ್ಲ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಪೊಲೀಸರ ವಿಚಾರಣೆ ಆರಂಭವಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಲ್ಲಿ ಭದ್ರತೆಗೆ ನಿಯೋಜಿಸಲ್ಪಟ್ಟವರ ವಿರುದ್ಧ ಮತ್ತು (ಮಹಿಳೆಯ) ಪ್ರವೇಶಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ಅಧಿಕಾರಿಗಳ ಪ್ರಕಾರ, ಶ್ರೀರಂಗಪಟ್ಟಣದ ಸಹಾಯಕ ಭೂ ದಾಖಲೆಗಳ ನಿರ್ದೇಶಕರ (ADLR) ಕಚೇರಿಯಲ್ಲಿ ಜುಲೈ 3ರಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿ ಹುಸೇನ್ ನನ್ನು ಬಂಧಿಸಿದ್ದರು. ನಂತರ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಹುಸೇನ್ ಶ್ರೀರಂಗಪಟ್ಟಣ ತಾಲ್ಲೂಕು ಭೂ ದಾಖಲೆಗಳ ಕಚೇರಿಗೆ ಅಕ್ರಮವಾಗಿ ಪ್ರವೇಶಿಸಿ, ಅಕಾರ್‌ಬಂದ್ (ಭೂಮಿಯ ಗಡಿ ಗುರುತಿಸುವಿಕೆ) ಕೆಲಸ, ದಾಖಲೆಗಳ ಡಿಜಿಟಲೀಕರಣ ಮತ್ತು ಸರ್ಕಾರಿ ಸಾಫ್ಟ್‌ವೇರ್ ಬಳಸಿ ನಕಲಿ ದಾಖಲೆಗಳನ್ನು ರಚಿಸುವಲ್ಲಿ ಸಹಾಯ ಮಾಡಿದ ಆರೋಪವಿದೆ.

ಇಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ಮತ್ತು ಡಿಎಲ್‌ಎಸ್‌ಎ ಅಧ್ಯಕ್ಷ ಚಂದ್ರಶೇಖರ್ ಸಿ, ಕೆಎಸ್‌ಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿ ಶಶಿಧರ್ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಬಾಲಸುಬ್ರಮಣಿ, ಸದಸ್ಯ ಡಾ. ಮೋಹನ್ ರಾವ್ ನಲ್ವಾಡೆ ಮತ್ತು ಡಿಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿ ಆನಂದ್ ಎಂ ಅವರನ್ನು ಒಳಗೊಂಡ ತಂಡ ತಪಾಸಣೆ ನಡೆಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.