ಕಾಂಗ್ರೆಸ್ ನತ್ತ ಜಿಟಿಡಿ ಚಿತ್ತ? ರಾಜ್ಯ ಸಹಕಾರ ಮಹಾ ಮಂಡಲದ ಅಧ್ಯಕ್ಷರಾಗಿ GT ದೇವೇಗೌಡ ಆಯ್ಕೆಗೆ ಸಿಎಂ ಡಿಕೆಶಿ ಸಹಮತ!
ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಜಿ.ಟಿ. ದೇವೇಗೌಡ ಅವರ ಆಯ್ಕೆಗೆ ಸಿಎಂ ಡಿಕೆಶಿ ಸಹಮತ ವ್ಯಕ್ತಪಡಿಸಿದ್ದರು. ಹೀಗಾಗಿ ಜಿ.ಟಿ ದೇವೇಗೌಡ ಸಹಕಾರ ಮಹಾ ಮಂಡಲಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರು: ಕರ್ನಾಟಕ ಸಹಕಾರ ಮಹಾ ಮಂಡಲಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ನೇತೃತ್ವದ ತಂಡ ಗೆಲುವು ಸಾಧಿಸಿದ್ದಾರೆ.
ಜಿ.ಟಿ. ದೇವೇಗೌಡ ಅವರಿಗೆ ಅಧ್ಯಕ್ಷ ಸ್ಥಾನ ನೀಡುವ ವಿಚಾರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಒಪ್ಪಿಗೆ ನೀಡಿದ್ದಾರೆ. ಚುನಾವಣೆಗೂ ಮುನ್ನ ಮುಖ್ಯಮಂತ್ರಿ ನಿವಾಸದಲ್ಲಿ ಈ ಸಂಬಂಧ ಮಹತ್ವದ ಸಭೆ ನಡೆದಿತ್ತು. ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಜಿ.ಟಿ. ದೇವೇಗೌಡ ಅವರ ಆಯ್ಕೆಗೆ ಸಿಎಂ ಡಿಕೆಶಿ ಸಹಮತ ವ್ಯಕ್ತಪಡಿಸಿದ್ದರು. ಹೀಗಾಗಿ ಜಿ.ಟಿ ದೇವೇಗೌಡ ಸಹಕಾರ ಮಹಾ ಮಂಡಲಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಇದೀಗ ಸಹಕಾರ ಮಹಾ ಮಂಡಲದ ಅಧ್ಯಕ್ಷ ಸ್ಥಾನ ಜಿ.ಟಿ. ದೇವೇಗೌಡ ಅವರಿಗೆ ಒಲಿದಿರುವುದು ರಾಜ್ಯ ರಾಜಕೀಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಜೆಡಿಎಸ್‌ನಿಂದ ಇತ್ತೀಚಿನ ದಿನಗಳಲ್ಲಿ ಅಂತರ ಕಾಯ್ದುಕೊಂಡಿರುವ ಜಿ.ಟಿ. ದೇವೇಗೌಡ ಅವರು ಕಾಂಗ್ರೆಸ್‌ನತ್ತ ಮುಖ ಮಾಡಲಿದ್ದಾರೆಯೇ ಎಂಬ ಪ್ರಶ್ನೆಯೂ ಮುನ್ನೆಲೆಗೆ ಬಂದಿದೆ.
ಸಹಕಾರ ಕ್ಷೇತ್ರದಲ್ಲಿ ದೀರ್ಘಾವಧಿಯ ಅನುಭವ ಹೊಂದಿರುವ ಜಿ.ಟಿ. ದೇವೇಗೌಡ ಅವರ ನೇತೃತ್ವಕ್ಕೆ ಮಂಡಲದ ನಿರ್ದೇಶಕರು ಬೆಂಬಲ ಸೂಚಿಸಿದ್ದಾರೆ. ಈ ಆಯ್ಕೆಯು ಸಹಕಾರ ರಂಗದಲ್ಲಿ ಅವರ ಹಿಡಿತ ಮತ್ತೊಮ್ಮೆ ಸಾಬೀತಾಗುವಂತೆ ಮಾಡಿದೆ. ಮಹಾ ಮಂಡಲದ ಅಭಿವೃದ್ಧಿಗೆ ಶ್ರಮಿಸುವುದಾಗಿ ಈ ವೇಳೆ ಜಿ.ಟಿ. ದೇವೇಗೌಡ ಭರವಸೆ ನೀಡಿದ್ದಾರೆ.

ಬೀದಿಗೆ ಬಿತ್ತು ಕೌಟುಂಬಿಕ ಕಲಹ: ಶಾಸಕ ಹರೀಶ್ಗೌಡ ಪತ್ನಿಗೆ ಅಶ್ಲೀಲ ಕಮೆಂಟ್; ಜಿ.ಟಿ ದೇವೇಗೌಡ ಅಳಿಯನಿಂದಲೇ ಕೃತ್ಯ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


