ಸಂಚಾರ ನಿಯಮ ಉಲ್ಲಂಘನೆ: ಹೆಲ್ಮೆಟ್ ಇಲ್ಲದೆ ಬುಲೆಟ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ 500 ರೂ ದಂಡ..!
ಸರ್ಕಾರಿ ಪ್ರೌಢಶಾಲೆಗಳಿಗೆ ಕಂಪ್ಯೂಟರ್ ಲ್ಯಾಬ್‌ಗಳ ವಿತರಣೆ ಅಂಗವಾಗಿ ‘ಶೀ ಫಾರ್ ಸೊಸೈಟಿ’ ಆಯೋಜಿಸಿದ್ದ ಬೈಕ್ ರ‍್ಯಾಲಿಯಲ್ಲಿ ಶಾಸಕ ಪ್ರಕಾಶ್ ಕೋಳಿವಾಡ ಅವರು ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ್ದರು.

ಹಾವೇರಿ: ಸಾಮಾನ್ಯ ಜನರಾಗಲಿ, ಜನಪ್ರತಿನಿಧಿಗಳೇ ಆಗಲಿ ‘ನಿಯಮ ಎಲ್ಲರಿಗೂ ಒಂದೇ’ ಎಂಬುದನ್ನು ಹಾವೇರಿ ಪೊಲೀಸರು ಮತ್ತೊಮ್ಮೆ ತೋರಿಸಿದ್ದಾರೆ.
ಹೆಲ್ಮೆಟ್ ಧರಿಸದೆ ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ್ದ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಅವರಿಗೆ ನೋಟಿಸ್ ಜಾರಿ ಮಾಡಿ, ರೂ. 500 ದಂಡ ವಿಧಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಗೆ ವ್ಯಾಪಕ ಟೀಕೆ ವ್ಯಕ್ತವಾದ ಬಳಿಕ ಪೊಲೀಸರು ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದು, ತಮ್ಮ ತಪ್ಪನ್ನು ಒಪ್ಪಿಕೊಂಡ ಪ್ರಕಾಶ್ ಕೋಳಿವಾಡ ದಂಡ ಪಾವತಿಸಿದ್ದಾರೆ.
ಸರ್ಕಾರಿ ಪ್ರೌಢಶಾಲೆಗಳಿಗೆ ಕಂಪ್ಯೂಟರ್ ಲ್ಯಾಬ್‌ಗಳ ವಿತರಣೆ ಅಂಗವಾಗಿ ‘ಶೀ ಫಾರ್ ಸೊಸೈಟಿ’ ಆಯೋಜಿಸಿದ್ದ ಬೈಕ್ ರ‍್ಯಾಲಿಯಲ್ಲಿ ಶಾಸಕ ಪ್ರಕಾಶ್ ಕೋಳಿವಾಡ ಅವರು ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ್ದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿತ್ತು.
ಹಾವೇರಿ ಜಿಲ್ಲಾ ಪೊಲೀಸರು ಈಗಾಗಲೇ ಸಿಸಿಟಿವಿ ಹಾಗೂ ಸಂಚಾರ ಸಿಗ್ನಲ್ ಕ್ಯಾಮೆರಾಗಳ ಮೂಲಕ ಹೆಲ್ಮೆಟ್ ಧರಿಸದ ವಾಹನ ಸವಾರರಿಗೆ ದಂಡ ವಿಧಿಸುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ನೇತೃತ್ವದ ಬೈಕ್ ರ‍್ಯಾಲಿಯ ದೃಶ್ಯಗಳು ವೈರಲ್ ಆದ ಬಳಿಕ ಪೊಲೀಸರು ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದರು.
ಹಲವು ಬಾರಿ ರಾಜಕೀಯ ನಾಯಕರು ಬೈಕ್ ರ‍್ಯಾಲಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ವೇಳೆ ಸಂಚಾರ ನಿಯಮಗಳನ್ನು ನಿರ್ಲಕ್ಷಿಸುತ್ತಾರೆ.
ಜಾಗೃತ ನೆಟ್ಟಿಗರು ಇಂತಹ ಘಟನೆಗಳನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ನಿಯಮಗಳು ಎಲ್ಲರಿಗೂ ಒಂದೇ” ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಪ್ರಕಾಶ್ ಕೋಳಿವಾಡ, “ಪೊಲೀಸ್ ಇಲಾಖೆ ನನಗೆ ನೋಟಿಸ್ ನೀಡಿದೆ. ನಾನು ಅದನ್ನು ಗೌರವಿಸುತ್ತೇನೆ. ನಾನು ತಪ್ಪು ಮಾಡಿದ್ದೇನೆ ಮತ್ತು ಅದನ್ನು ಒಪ್ಪಿಕೊಂಡಿದ್ದೇನೆ. ಪೊಲೀಸರು ವಿಧಿಸಿದ ದಂಡವನ್ನೂ ಪಾವತಿಸಿದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



