ನೇಪಾಳ ಪ್ರವಾಹ: ಸಂಕಷ್ಟದಲ್ಲಿ ಕನ್ನಡಿಗರು; ರಕ್ಷಣೆಗೆ ರಾಜ್ಯ ಸರ್ಕಾರ ತುರ್ತು ಸಹಾಯವಾಣಿ, Google Form ಬಿಡುಗಡೆ..!
ಕೈಲಾಸ ಮಾನಸ ಸರೋವರ ಯಾತ್ರೆ, ಪ್ರವಾಸ ಅಥವಾ ಇತರ ಕಾರಣಗಳಿಂದ ನೇಪಾಳ ಹಾಗೂ ಟಿಬೆಟ್ ಗಡಿ ಪ್ರದೇಶಗಳಿಗೆ ತೆರಳಿರುವ ಕನ್ನಡಿಗರು ಪ್ರವಾಹದಲ್ಲಿ ಸಿಲುಕಿದ್ದರೆ, ಅವರ ಕುಟುಂಬಸ್ಥರು, ಸಂಬಂಧಿಕರು ಹಾಗೂ ಪ್ರವಾಸ ಆಯೋಜಕರು ತಕ್ಷಣವೇ ಗೂಗಲ್ ಫಾರ್ಮ್ ಮೂಲಕ ಅಗತ್ಯ ಮಾಹಿತಿಯನ್ನು ದಾಖಲಿಸುವಂತೆ ಮನವಿ ಮಾಡಿದೆ.

ಬೆಂಗಳೂರು: ನೇಪಾಳ-ಟಿಬೆಟ್ ಗಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರಗೊಂಡಿರುವ ಬೆನ್ನಲ್ಲೇ, ಅಲ್ಲಿಗೆ ತೆರಳಿರುವ ಕನ್ನಡಿಗರ ಸುರಕ್ಷತೆ ಬಗ್ಗೆ ಆತಂಕ ಹೆಚ್ಚಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಸಂಕಷ್ಟದಲ್ಲಿರುವವರನ್ನು ಗುರುತಿಸಿ ರಕ್ಷಣಾ ಕಾರ್ಯಾಚರಣೆಗೆ ನೆರವಾಗಲು ಅಧಿಕೃತ ತುರ್ತು ಸಹಾಯವಾಣಿ ಹಾಗೂ ಗೂಗಲ್ ಫಾರ್ಮ್ ಬಿಡುಗಡೆ ಮಾಡಿದೆ.
ವಿಪತ್ತು ನಿರ್ವಹಣೆ ಸಚಿವಾಲಯ (ಕoದಾಯ ಇಲಾಖೆ) ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಕೈಲಾಸ ಮಾನಸ ಸರೋವರ ಯಾತ್ರೆ, ಪ್ರವಾಸ ಅಥವಾ ಇತರ ಕಾರಣಗಳಿಂದ ನೇಪಾಳ ಹಾಗೂ ಟಿಬೆಟ್ ಗಡಿ ಪ್ರದೇಶಗಳಿಗೆ ತೆರಳಿರುವ ಕನ್ನಡಿಗರು ಪ್ರವಾಹದಲ್ಲಿ ಸಿಲುಕಿದ್ದರೆ, ಅವರ ಕುಟುಂಬಸ್ಥರು, ಸಂಬಂಧಿಕರು ಹಾಗೂ ಪ್ರವಾಸ ಆಯೋಜಕರು ತಕ್ಷಣವೇ ಗೂಗಲ್ ಫಾರ್ಮ್ ಮೂಲಕ ಅಗತ್ಯ ಮಾಹಿತಿಯನ್ನು ದಾಖಲಿಸುವಂತೆ ಮನವಿ ಮಾಡಿದೆ.
ಫಾರ್ಮ್‌ನಲ್ಲಿ ಸಂತ್ರಸ್ತರ ಹೆಸರು, ಸಂಪರ್ಕ ಸಂಖ್ಯೆ, ಪ್ರಸ್ತುತ ಇರುವ ಸ್ಥಳ, ಪಾಸ್‌ಪೋರ್ಟ್ ವಿವರಗಳು ಹಾಗೂ ತುರ್ತು ಸಂಪರ್ಕ ಸಂಖ್ಯೆಗಳಂತಹ ಮಾಹಿತಿಯನ್ನು ನಮೂದಿಸಬಹುದು. ಈ ಮೂಲಕ ಸಂಕಷ್ಟದಲ್ಲಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ.
ಸಂಗ್ರಹಿಸಲಾದ ಮಾಹಿತಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA), ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಚೀನಾದ ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ.
ಬಳಿಕ ಸಂಬಂಧಪಟ್ಟ ಸಂಸ್ಥೆಗಳ ಸಹಕಾರದೊಂದಿಗೆ ಸಿಲುಕಿರುವ ಕನ್ನಡಿಗರಿಗೆ ರಕ್ಷಣೆ, ವೈದ್ಯಕೀಯ ನೆರವು ಹಾಗೂ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುವ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ತುರ್ತು ಸಹಾಯವಾಣಿ
ಸಹಾಯವಾಣಿ ಸಂಖ್ಯೆಗಳು: 1070 / 080-22253707
ಇ-ಮೇಲ್: seockarnataka@gmail.com
ನೇಪಾಳದಲ್ಲಿ ಭೋಟಿ ಕೋಶಿ ನದಿ ಉಕ್ಕಿ ಹರಿದ ಪರಿಣಾಮ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಭಾರತೀಯ ಯಾತ್ರಿಕರು ಸೇರಿದಂತೆ ಅನೇಕ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿರುವ ವರದಿಗಳಿವೆ. ಕೆಲವರು ಸಂಪರ್ಕಕ್ಕೆ ಸಿಗದಿರುವ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿದೆ.
ನೇಪಾಳ ಅಥವಾ ಟಿಬೆಟ್ ಗಡಿ ಪ್ರದೇಶದಲ್ಲಿ ಯಾವುದೇ ಕನ್ನಡಿಗರು ಸಿಲುಕಿರುವ ಮಾಹಿತಿ ಇದ್ದರೆ, ಅವರ ಕುಟುಂಬಸ್ಥರು ಆತಂಕಕ್ಕೊಳಗಾಗದೆ ಕೂಡಲೇ ಸರ್ಕಾರದ ಗೂಗಲ್ ಫಾರ್ಮ್‌ನಲ್ಲಿ ವಿವರಗಳನ್ನು ದಾಖಲಿಸುವಂತೆ ಮನವಿ ಮಾಡಲಾಗಿದೆ. ಜೊತೆಗೆ, ತುರ್ತು ಪರಿಸ್ಥಿತಿಯಲ್ಲಿ ಮೇಲ್ಕಂಡ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಸರ್ಕಾರ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



