'ಹನೂರು ಎನ್‌ಕೌಂಟರ್'ಗೆ ಬಿಗ್ ಟ್ವಿಸ್ಟ್: ತನಿಖೆಯಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಪ್ಯಾಂಗೋಲಿನ್ ಕಳ್ಳಸಾಗಣೆ ಜಾಲ ಪತ್ತೆ!
ಎನ್‌ಕೌಂಟರ್ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು, ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ಯಾಂಗೋಲಿನ್-ಕಳ್ಳಸಾಗಣೆ ಜಾಲವನ್ನು ಪತ್ತೆ ಮಾಡಿದ್ದಾರೆ.

ಮೈಸೂರು: ಕರ್ನಾಟಕದ ಅರಣ್ಯ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟ ಹನೂರು ಕಾಡಿನ ವಿವಾದಾತ್ಮಕ ಎನ್‌ಕೌಂಟರ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು, ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ಯಾಂಗೋಲಿನ್-ಕಳ್ಳಸಾಗಣೆ ಜಾಲವನ್ನು ಪತ್ತೆ ಮಾಡಿದ್ದಾರೆ.
ತನಿಖಾ ತಂಡದ ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳ ಪ್ರಕಾರ, ಚಾಮರಾಜನಗರ-ತಮಿಳುನಾಡು ಗಡಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೇಟೆಗಾರರು, ನಿರ್ವಾಹಕರು ಮತ್ತು ಕೊರಿಯರ್‌ಗಳ ಜಾಲವನ್ನು ನಿರ್ಮಿಸಿದ್ದು, ಮುನಿಯಾಂಡಿ ಎಂದು ಗುರುತಿಸಲಾದ ವ್ಯಕ್ತಿ ಇದರ ಕಿಂಗ್‌ಪಿನ್ ಎಂದು ಹೇಳಿದ್ದಾರೆ.
ಈ ಜಾಲವು ಸ್ಥಳೀಯ ವನ್ಯಜೀವಿ ಬೇಟೆಯನ್ನು ಮೀರಿ ವಿಸ್ತರಿಸಿದ್ದು, ಅಳಿವಿನಂಚಿನಲ್ಲಿರುವ ನಿರುಪದ್ರವಿ ಚಿಪ್ಪುಹಂದಿ(ಪ್ಯಾಂಗೋಲಿನ್) ಮತ್ತು ಇತರ ಅವಶೇಷಗಳನ್ನು ವಿದೇಶಿ ಮಾರುಕಟ್ಟೆಗಳಿಗೆ ಸಾಗಿಸುವುದನ್ನು ಒಳಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಹನೂರು ತನಿಖೆಗೆ ಸಂಬಂಧಿಸಿದಂತೆ ಹೊರಹೊಮ್ಮುತ್ತಿರುವ ಮಾಹಿತಿಯ ಪ್ರಕಾರ, ಮುನಿಯಾಂಡಿ ದೊಡ್ಡ ಕಳ್ಳಸಾಗಣೆ ಜಾಲದಲ್ಲಿ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಶಂಕಿಸಲಾಗಿದೆ. ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಸಹಚರರನ್ನು ಬಳಸಿಕೊಂಡು ಪ್ಯಾಂಗೋಲಿನ್‌ಗಳನ್ನು ಸಂಗ್ರಹಿಸಲು ಮತ್ತು ಅವುಗಳ ಅವಶೇಷಗಳನ್ನು ಗುಪ್ತ ಮಾರ್ಗಗಳ ಮೂಲಕ ಸಾಗಿಸಲು ಸಹಾಯ ಮಾಡುತ್ತಿದ್ದಾರೆ ಎನ್ನಲಾಗಿದೆ.
ಈ ಜಾಲದೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳಲ್ಲಿ ಒಬ್ಬರಾದ ರಾಬರ್ಟ್ ಪಿಂಟೊ ಪೆರಿಯನಾಯಗನ್ ಮೇಲೆ ತನಿಖಾಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ. ಎಂಎಸ್ಸಿ ಪದವಿ ಪಡೆದಿರುವ ಪಿಂಟೊ ಮುನಿಯಾಂಡಿಯೊಂದಿಗೆ ನಿಕಟ ಸಂಬಂಧ ಹೊಂದಿದ್ದಾನೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ತನಿಖಾಧಿಕಾರಿಗಳಿಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ಪ್ರಾಣಿಗಳನ್ನು ಬೇಟೆಯಾಡಿದ ನಂತರ ಪ್ಯಾಂಗೋಲಿನ್ ಅವಶೇಷಗಳನ್ನು ಸ್ವೀಕರಿಸಲು ಮತ್ತು ಮರೆಮಾಚಲು ಮುನಿಯಾಂಡಿ ಪಿಂಟೊಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಮುಂದಿನ ಸಾಗಣೆಗಾಗಿ ಇತರ ಗುಪ್ತ ಸ್ಥಳಗಳಿಗೆ ಸ್ಥಳಾಂತರಿಸುವ ಮೊದಲು ಅವಶೇಷಗಳನ್ನು ಪಿಂಟೊ ಅವರ ನಿವಾಸದಲ್ಲಿರುವ ನೀರಿನ ಸಂಪ್‌ನಲ್ಲಿ ರಹಸ್ಯವಾಗಿ ಸಂಗ್ರಹಿಸಲಾಗಿದೆ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



