ಧಾರವಾಡ: ಮಗುವಿನ ಎದುರೇ ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ
ಗರಗ ಗ್ರಾಮದ ಮೌಲಾಸಾಬ್(28) ಎಂಬ ವ್ಯಕ್ತಿ ತನ್ನ ಪತ್ನಿ ಸಲ್ಮಾಳನ್ನು(21) ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಧಾರವಾಡ: ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಗರಗ ಗ್ರಾಮದ ಮೌಲಾಸಾಬ್(28) ಎಂಬ ವ್ಯಕ್ತಿ ತನ್ನ ಪತ್ನಿ ಸಲ್ಮಾಳನ್ನು(21) ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತನ್ನ ಒಂದೂವರೆ ವರ್ಷದ ಮಗುವಿನ ಎದುರೇ ಮೌಲಾಸಾಬ್ ಪತ್ನಿಯನ್ನು ಕೊಲೆ ಮಾಡಿ ನೇಣಿಗೆ ಶರಣಾಗಿದ್ದಾನೆ. ಮೂರು ವರ್ಷಗಳ ಹಿಂದಷ್ಟೇ ಇವರ ಮದುವೆಯಾಗಿತ್ತು. ಇದೀಗ ತಂದೆ-ತಾಯಿಯನ್ನು ಕಳೆದುಕೊಂಡು ಮಗು ಅನಾಥವಾಗಿದೆ.
ತಡರಾತ್ರಿವರೆಗೂ ಮನೆಯಲ್ಲಿ ಏನೂ ಶಬ್ದ ಬಾರದೇ ಇದ್ದಿದ್ದರಿಂದ ವೃದ್ಧೆಯೊಬ್ಬರು ಹೋಗಿ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ನಮ್ಮ ಮಗಳು ಸಲ್ಮಾಗೆ ಅತ್ತೆ, ಮಾವನ ಕಾಟ ಇತ್ತು. ಈ ಕಾಟಕ್ಕೆ ತನ್ನ ಮಗಳನ್ನೇ ಬಲಿ ಪಡೆದುಕೊಂಡಿದ್ದಾರೆ. ಅಳಿಯನ ಕಾಟ ಏನೂ ಇರಲಿಲ್ಲ. ಕೂಲಿ ಮಾಡುತ್ತಿದ್ದ ಆತನಿಗೆ ನಾವೇ ಸಹಾಯ ಮಾಡುತ್ತಿದ್ದೆವು. ನನ್ನ ಮಗಳು ಸಣ್ಣವಳು. ಆಕೆಯಲ್ಲಿ ಚುರುಕುತನ ಇರಲಿಲ್ಲ ಎಂದು ಸಲ್ಮಾ ತಾಯಿ ಆರೋಪಿಸಿದ್ದಾರೆ.
ಘಟನೆ ನಡೆದ ತಕ್ಷಣ ಸ್ಥಳಕ್ಕೆ ಎಸ್‌ಪಿ ಗುಂಜನ್ ಆರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



