ರಾಜ್ಯ

ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಮಾಗಡಿ ರಸ್ತೆಯಲ್ಲಿ ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ, Video!

ಬೆಂಗಳೂರು ನಗರ ಪೊಲೀಸ್ ಗಸ್ತು ತಂಡವು ಮಾಗಡಿ ರಸ್ತೆಯಲ್ಲಿ ಹಠಾತ್ ಹೃದಯಾಘಾತದಿಂದ ಬಳಲುತ್ತಿದ್ದ 34 ವರ್ಷದ ಬೈಕ್ ಸವಾರನಿಗೆ CPR ಮಾಡುವ ಮೂಲಕ ಜೀವವನ್ನು ಉಳಿಸಿದೆ.

ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಮಾಗಡಿ ರಸ್ತೆಯಲ್ಲಿ ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ, Video!
ಬೆಂಗಳೂರು ಪೊಲೀಸರು
Published On :

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಗಸ್ತು ತಂಡವು ಮಾಗಡಿ ರಸ್ತೆಯಲ್ಲಿ ಹಠಾತ್ ಹೃದಯಾಘಾತದಿಂದ ಬಳಲುತ್ತಿದ್ದ 34 ವರ್ಷದ ಬೈಕ್ ಸವಾರನಿಗೆ CPR ಮಾಡುವ ಮೂಲಕ ಜೀವವನ್ನು ಉಳಿಸಿದೆ.

​ಮಾಗಡಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅಗ್ನಿಶಾಮಕ ಠಾಣೆಯ ಬಳಿ ಈ ಘಟನೆ ಸಂಭವಿಸಿದೆ. 34 ವರ್ಷದ ರವಿ ಎಂಬುವರು ಬೈಕ್ ನಲ್ಲಿ ಹೋಗುತ್ತಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಬೈಕ್ ಅನ್ನು ರಸ್ತೆ ಪಕ್ಕ ನಿಲ್ಲಿಸಿ ಕೆಳಗೆ ಕುಸಿದು ಬಿದ್ದಿದ್ದಾರೆ.

ಹೊಯ್ಸಳ-88 ವಾಹನದಲ್ಲಿ ಗಸ್ತು ತಿರುಗುತ್ತಿದ್ದ ಸಿಬ್ಬಂದಿ ರವಿ ಕುಸಿದು ಬೀಳುತ್ತಿರುವುದನ್ನು ಗಮನಿಸಿದರು. ಪರಿಸ್ಥಿತಿಯ ತೀವ್ರತೆಯನ್ನು ಗುರುತಿಸಿದ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಸಚ್ಚಿದಾನಂದಮೂರ್ತಿ ಮತ್ತು ಹೆಡ್ ಕಾನ್‌ಸ್ಟೆಬಲ್ ಬಸವರಾಜು ಸ್ಥಳಕ್ಕೆ ಧಾವಿಸಿ ತಕ್ಷಣ ಸಿಪಿಆರ್ ನೀಡಲು ಪ್ರಾರಂಭಿಸಿದರು. ಸಕಾಲಿಕ ನೆರವು ರವಿಯನ್ನು ಸ್ಥಿರಗೊಳಿಸಲು ಸಹಾಯ ಮಾಡಿತು. ರವಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.