'ಕೇರಳದಲ್ಲಿ ಯಾರು ಬಟ್ಟೆಬಿಚ್ಕೊಂಡು ಕುಣಿದ್ರೂ ಅಷ್ಟೇ; ಮಂಗಳೂರು ರೈಲ್ವೆ ಸಂಬಂಧ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ'; Video
ಕೇರಳದಲ್ಲಿ ಎಲ್ಲ ವಿರೋಧ ಪಕ್ಷದವರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ಮಾತನಾಡುವವರು ಮಾತನಾಡಲಿ ನಾನು ಕೆಲಸ ಮಾಡುವವನು ಎಂದು ಎಲ್ಲರಿಗೂ ಗೊತ್ತಿದೆ.

ತುಮಕೂರು: ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿನಿಂತುಕೊಂಡರೂ ಅಷ್ಟೇ ಮಂಗಳೂರು ರೈಲ್ವೆ ವಿಭಾಗಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರದ ಮಂತ್ರಿಯಾಗಿ ಅಡಚಡಣೆಗಳನ್ನು ಸರಿಪಡಿಸುವ ಕೆಲಸ ಮಾಡಿದ್ದೇನೆ. ಕೇರಳಂಗೆ ಯಾವುದೇ ಅಪಚಾರ ಮಾಡಿಲ್ಲ, ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಜಾಲವನ್ನು ದಕ್ಷಿಣ ರೈಲ್ವೆ ವ್ಯಾಪ್ತಿಯ ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಕೇರಳದಲ್ಲಿ ಎಲ್ಲ ವಿರೋಧ ಪಕ್ಷದವರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ಮಾತನಾಡುವವರು ಮಾತನಾಡಲಿ ನಾನು ಕೆಲಸ ಮಾಡುವವ ಎಂದು ಎಲ್ಲರಿಗೂ ಗೊತ್ತಿದೆ.
ಯುಡಿಎಫ್ಓ, ಸಿಪಿಐ, ಸಿಪಿಎಂ ಎಲ್ಲಾ ಪಕ್ಷದವರು ನನ್ನ ವಿರುದ್ಧ ಬಟ್ಟೆ ಬಿಚ್ಚಿ ನಿಂತ್ಕೊಂಡು ನಾನು ರಾಜೀನಾಮೆ ಕೊಡಬೇಕು ಅನ್ನುತ್ತಿದ್ದಾರೆ. ನಾನೇನು ತಪ್ಪು ಮಾಡಿಲ್ಲ. ಭಾರತ ಸರ್ಕಾರದ ಮಂತ್ರಿಯಾಗಿ ಈ ರೀತಿಯಾಗಿರುವ ಅಡಚಡಣೆಗಳನ್ನು ಸರಿಪಡಿಸುವ ಕೆಲಸ ಮಾಡಿದ್ದೇನೆ ಎಂದರು.
ಕೇರಳಕ್ಕೆ ಸಂಬಂಧ ಪಟ್ಟಂತೆ ಯಾವುದೇ ಅಪಚಾರ ಮಾಡಿಲ್ಲ ಎಂದ ಸೋಮಣ್ಣ, ಸುಮಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದೇವೆ. ಮೈಸೂರು ವಿಭಾಗಕ್ಕೆ ಸೇರಿಸಿ ಇತಿಶ್ರೀ ಹಾಡಿದ್ದೇನೆ. ರೈಲ್ವೆ ಇಲಾಖೆಯಲ್ಲಿ ಸ್ಥಳೀಯರಿಗೆ ಅವಕಾಶ ಸಿಗುತ್ತದೆ ಎಂದ ಅವರು, ಕೇರಳದಲ್ಲಿ 20 ಮೀನುಗಾರಿಕಾ ಬಂದರು ಇವೆ. ಅದರಲ್ಲಿ 17 ಅಧಿಕೃತವಾಗಿವೆ.
ಕೇರಳ ಬಜೆಟ್ ಇದಕ್ಕಾಗಿ ಹೆಚ್ಚಿನ ಆದ್ಯತೆ ಕೊಟ್ಟಿದೆ. ನಿಮ್ಮ ರಾಜ್ಯದ್ದು ನೀವು ಏನೂ ಬೇಕಾದರೂ ಮಾಡಿ. ಕರ್ನಾಟಕದಲ್ಲಿ ಇರೋದು ಒಂದೇ ಬಂದರು. ಅದು ಮಂಗಳೂರು ಬಂದರು. ಅದಕ್ಕೆ ಸರಕು -ಆಮದು ರಫ್ತುಗೆ ಅನುಕೂಲ ಮಾಡಿದ್ದೇವೆ ಎಂದರು.
25 ವರ್ಷಗಳಿಂದ ಇದರ ಹೋರಾಟ ಇತ್ತು. ಹಿಂದೆ ಹಲವು ಮಂತ್ರಿಗಳು ತುಂಬಾ ಪ್ರಯತ್ನ ಮಾಡಿದ್ದಾರೆ. ನಾನು ಮಂತ್ರಿ ಆಗಿರುವುದರಿಂದ ಅದರ ಬಗ್ಗೆ ಸಂಪೂರ್ಣ ಮಾಹಿತಿ ಇತ್ತು. ಅಲ್ಲಿನ ಲೋಕಸಭಾ ಸದಸ್ಯರಾದ ಕ್ಯಾ.ಬ್ರಿಜೇಶ್ ಚೌಟಾ ಅವರು ನನ್ನನ್ನು ಭೇಟಿ ಮಾಡಿ ಇದಕ್ಕೆ ಒಂದು ರೂಪ ಕೊಡಬೇಕು ಅಂತಾ ಕೋರಿ ಕೊಂಡಿದ್ದರು.
ಈ ಹಿಂದೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಕೂಡ ಪ್ರಯತ್ನ ಮಾಡಿದ್ದರು. ಮೂರು ಜನ ಜನರಲ್ ಮ್ಯಾನೇಜರ್‌ಗಳನ್ನು ಸ್ಥಳಕ್ಕೆ ಕರೆದುಕೊಂಡು ಹೋದ ಏಕೈಕ ಮಂತ್ರಿ ಇದ್ದರೆ ಅದು ನಾನು ಎಂದ ಸೋಮಣ್ಣ, ಈ ಬಗ್ಗೆ ಸಾಧಕ ಭಾದಕಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಇದರಲ್ಲಿ ಯಾವುದೇ ಫೆವರಿಸಂ ಇಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



