ರಾಜ್ಯ

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು; ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!

'ಅವರು ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಮಾಲ್ಡಾ ತಲುಪುವ ನಿರೀಕ್ಷೆಯಿದೆ ಮತ್ತು ಅಲ್ಲಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುವುದು' ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು; ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ಪ್ರಾತಿನಿಧಿಕ ಚಿತ್ರ — AI generated
Published On :

ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ಈ ಹಿಂದೆ ವಶಕ್ಕೆ ಪಡೆಯಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಸೋಮವಾರ ಗಡಿಪಾರು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮ ವಲಸಿಗರ ವಿರುದ್ಧ ನಗರಾದ್ಯಂತ ನಡೆಸಿದ ಕಾರ್ಯಾಚರಣೆಯ ಭಾಗವಾಗಿ ನಗರದ 10 ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಅವರು ಹೇಳಿದರು.

'ಇಂದು, 10 ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಗಡೀಪಾರು ಮಾಡುವ ಉದ್ದೇಶದಿಂದ SMVT ಬೆಂಗಳೂರು ಟರ್ಮಿನಲ್‌ನಿಂದ ಪಶ್ಚಿಮ ಬಂಗಾಳದ ಮಾಲ್ಡಾ ರೈಲು ನಿಲ್ದಾಣಕ್ಕೆ ಕಳುಹಿಸಲಾಯಿತು' ಎಂದು ಪೊಲೀಸ್ ಉಪ ಆಯುಕ್ತ (ಎಲೆಕ್ಟ್ರಾನಿಕ್ ಸಿಟಿ) ಎಂ. ನಾರಾಯಣ ತಿಳಿಸಿದರು.

ಅವರನ್ನು 20 ಪೊಲೀಸ್ ಸಿಬ್ಬಂದಿ ಕರೆದೊಯ್ದರು ಎಂದು ಅವರು ಹೇಳಿದರು.

'ಅವರು ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಮಾಲ್ಡಾ ತಲುಪುವ ನಿರೀಕ್ಷೆಯಿದೆ ಮತ್ತು ಅಲ್ಲಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುವುದು' ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮ ವಲಸಿಗರ ಕುರಿತಾದ ಮಾಹಿತಿಯನ್ನು ಹಂಚಿಕೊಳ್ಳುವಂತೆ ನಾಗರಿಕರನ್ನು ಕೋರಿರುವ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರ ಸಹಕಾರ ಅತ್ಯಗತ್ಯವಾದರೂ, ಅದು ಕಾನೂನಿನ ಚೌಕಟ್ಟಿನೊಳಗೇ ಇರಬೇಕು. ನಗರದ ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ಶಂಕಿತ ಅಕ್ರಮ ವಲಸಿಗರನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಬೆಂಗಳೂರಿನಲ್ಲಿ ನಡೆಯುತ್ತಿರುವ 'ಆಪರೇಷನ್ ಮುಕ್ತ' ಮುಂದುವರಿಯಲಿದೆ ಎಂದೂ ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.