ಅಪ್ರಾಪ್ತರ ಮದ್ಯ ಪಾರ್ಟಿ: ಹೆತ್ತವರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು; ಪಬ್ ವಿರುದ್ಧ ಕೇಸ್ ದಾಖಲು
ಬಾಲಕ ಖಾಸಗಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಜ.31 ರಂದು ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭ ಮುಗಿದ ನಂತರ ಸ್ನೇಹಿತರೆಲ್ಲರೂ ಆರ್.ಆರ್ ನಗರದ ಪಬ್‌ವೊಂದರಲ್ಲಿ ಮದ್ಯದ ಪಾರ್ಟಿ ಮಾಡಿದ್ದರು.

ಬೆಂಗಳೂರು: ಪಬ್‌ವೊಂದರಲ್ಲಿ ಮದ್ಯ ಸೇವಿಸಿದ ನಂತರ ಮನೆಗೆ ಹೋಗಲು ಹೆದರಿದ ವಿದ್ಯಾರ್ಥಿಯೊಬ್ಬ ಕಟ್ಟಡದ 7ನೇ ಮಹಡಿಯಿಂದ ಹಾರಿ ಮೃತಪಟ್ಟ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆರ್.ಆರ್ ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಾಲಕ ಖಾಸಗಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಜ.31 ರಂದು ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭ ಮುಗಿದ ನಂತರ ಸ್ನೇಹಿತರೆಲ್ಲರೂ ಆರ್.ಆರ್ ನಗರದ ಪಬ್‌ವೊಂದರಲ್ಲಿ ಮದ್ಯದ ಪಾರ್ಟಿ ಮಾಡಿದ್ದರು.
ಮದ್ಯ ಸೇವಿಸಿದ್ದ ಬಾಲಕನನ್ನು ಆತನ ಸ್ನೇಹಿತ ವಿಷ್ಣುವರ್ಧನ್ ಸಮಾಧಿ ರಸ್ತೆಯಲ್ಲಿರುವ ಅಪಾಟ್೯ಮೆಂಟ್‌ವರೆಗೂ ಬಿಟ್ಟು ಹೋಗಿದ್ದ. ಆದರೆ ಮದ್ಯ ಸೇವಿಸಿದ್ದ ಹಿನ್ನೆಲೆಯಲ್ಲಿ ಬಾಲಕನಿಗೆ ಮನೆಗೆ ಹೋಗಲು ಭಯವಾಗಿದ್ದು, ಅಪಾರ್ಟ್‌ಮೆಂಟ್ 7ನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದ.
ತನಿಖೆ ವೇಳೆ ಬಾಲಕ ಪಬ್‌ನಲ್ಲಿ ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಅಪ್ರಾಪ್ತ ಬಾಲಕನಿಗೆ ಮದ್ಯಪಾನ ಮಾಡಲು ಅವಕಾಶ ನೀಡಿದ್ದ ಪಬ್ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ಜೆಜೆ ಕಾಯ್ದೆ ಮತ್ತು ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



