ರಾಜ್ಯ

ಉತ್ತರ ಕನ್ನಡ: ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ; ದೂರು ನೀಡಿದ್ದಕ್ಕೆ ಹತ್ಯೆ; ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ಘಟನೆ ನಡೆದಿದೆ. ಜ್ಯೋತಿಷಿ ಕಮಲಾಕರ್ ಭಟ್ ಜೊತೆ ಸುಚಿತ್ರ ಎಂಬಾಕೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು.

ಉತ್ತರ ಕನ್ನಡ: ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ; ದೂರು ನೀಡಿದ್ದಕ್ಕೆ ಹತ್ಯೆ; ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ
Published On :

ಕಾರವಾರ: ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ವೇಳೆ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ಘಟನೆ ನಡೆದಿದೆ. ಜ್ಯೋತಿಷಿ ಕಮಲಾಕರ್ ಭಟ್ ಜೊತೆ ಸುಚಿತ್ರ ಎಂಬಾಕೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಈ ವಿಚಾರ ತಿಳಿದ ಸುಚಿತ್ರ ಪುತ್ರಿ ತನ್ನ ತಂದೆ ಮಹೇಶ್ ನಾಯ್ಕ್ ಗೆ ಹೇಳಿದ್ದಾಳೆ. ಹೀಗಾಗಿ ಮಹೇಶ್ ನಾಯ್ಕ್ ಪೊಲೀಸ್​​ ಠಾಣೆಗೆ ತೆರಳಿ ದೂರು ನೀಡಿದ್ದರು. ಇದರಿಂದ ಕೆರಳಿದ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಮತ್ತು ಸಹಚರರು ಮಹೇಶ್ ನಾಯ್ಕ್ ಹಾಗೂ ಜೊತೆಗಿದ್ದವರ ಮೇಲೆ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​, ವಸಂತ್ ನಾಯ್ಕ ಮತ್ತು ಕುಮಾರ್​​ ಗಂಭೀರ ಗಾಯಗೊಂಡಿದ್ದು, ಈ ಪೈಕಿ ವಸಂತ್ ನಾಯ್ಕ ಆಸ್ಪತ್ರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಲೆ ಬಳಿಕ ಎಸ್ಕೇಪ್ ಆಗಲು ಯತ್ನಿಸಿದ ಖ್ಯಾತ ಜೋತಿಷಿ ಕಮಲಾಕರ ಭಟ್ ಮತ್ತು ಸುಚಿತ್ರಾ ಸೇರಿ ನಾಲ್ವರನ್ನು ಸಿದ್ದಾಪುರದಿಂದ ಬಂಧಿಸಲಾಗಿದ್ದರೆ ಶಿವಮೊಗ್ಗದಲ್ಲಿ ಮೂವರನ್ನು ಸಿದ್ದಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲಸದ ನಿಮಿತ್ತ ಮಹೇಶ್ ನಾಯ್ಕ್ ಬೆಂಗಳೂರಿನಲ್ಲಿ ವಾಸವಾಗಿದ್ದರು. ರಜೆ ದಿನಗಳಲ್ಲಿ ಸಿದ್ದಾಪುರಕ್ಕೆ ಹೋಗುತ್ತಿದ್ದರು.

ಇಬ್ಬರು ಹೆಣ್ಣುಮಕ್ಕಳೊಂದಿಗೆ ಸುಚಿತ್ರಾ ಸಿದ್ದಾಪುರದಲ್ಲಿ ವಾಸವಾಗಿದ್ದಳು. ಸುಚಿತ್ರಾಳಿಗೆ ಇತ್ತೀಚೆಗೆ ಜ್ಯೋತಿಷಿ ಕಮಲಾಕರ್ ಭಟ್ ಪರಿಚಯವಾಗಿತ್ತು. ನಂತರ ಇಬ್ಬರ ನಡುವೆ ಸಲುಗೆ ಬೆಳೆದು ಕಮಲಾಕರ್ ಭಟ್ ಆಗಾಗ ಸುಚಿತ್ರಾ ಮನೆಗೆ ಬರುತ್ತಿದ್ದವನು ಆಗಾಗ ಅಲ್ಲಿಯೇ ಉಳಿಯುತ್ತಿದ್ದನು. ಇದರಿಂದ ಕಸಿವಿಸಿಕೊಂಡಿದ್ದ ಹಿರಿಯ ಮಗಳು ತಾಯಿ ವರ್ತನೆಯನ್ನು ಪ್ರಶ್ನಿಸಿದ್ದಳು. ಕೋಪಗೊಂಡ ಸುಚಿತ್ರಾ ಮಕ್ಕಳಿಗೆ ಹಿಂಸೆ ನೀಡಲು ಶುರು ಮಾಡಿದ್ದಳು. ಕೊನೆಗೆ ಹಿರಿಯ ಪುತ್ರಿ ಎಲ್ಲಾ ವಿಚಾರವನ್ನು ತಂದೆಗೆ ತಿಳಿಸಿದ್ದಾಳೆ.

ಮಗಳಿಂದ ಪತ್ನಿಯ ಅಕ್ರಮ ಸಂಬಂಧದ ವಿಷಯ ತಿಳಿದ ಮಹೇಶ್ ನಾಯ್ಕ್ ಊರಿಗೆ ತೆರಳಿದ್ದು ಸಿದ್ದಾಪುರ ಠಾಣೆಯಲ್ಲಿ ದೂರು ನೀಡಿದ್ದರು. ದೂರು ನೀಡಿ ಸಹೋದರ ವಸಂತ್ ಮನೆಗೆ ಮಹೇಶ್ ತೆರಳಿದ್ದರು. ಇನ್ನು ತಮ್ಮ ವಿರುದ್ಧ ದೂರು ನೀಡಿರುವ ವಿಚಾರ ತಿಳಿದ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಗುಂಪಿನೊಂದಿಗೆ ವಸಂತ್ ಮನೆಗೆ ತಹೋಗಿ ಗಲಾಟೆ ಮಾಡಿದ್ದಾರೆ. ನಂತರ ಮಹೇಶ್ ನಾಯ್ಕ್, ವಸಂತ್ ನಾಯ್ಕ್ ಮತ್ತು ಕುಮಾರ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವಸಂತ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದರೇ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಅನೈತಿಕ ಸಂಬಂಧ, ಕೊಲೆ ಪ್ರಕರಣ ಸಂಬಂಧ ಸುಚಿತ್ರಾ, ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಇತರರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಕಮಲಾಕರ್ ಭಟ್ ಸೇರಿ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.