ವಿಬಿ-ಜಿ ರಾಮ್ ಜಿ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ
ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ನಿರ್ಣಯ ಮಂಡಿಸಿದರು.

ಬೆಂಗಳೂರು: ವಿರೋಧ ಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಮತ್ತು ಯುಪಿಎ ಯುಗದ ಮನರೇಗಾವನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದೆ.
ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ನಿರ್ಣಯ ಮಂಡಿಸಿದರು.
"ಕರ್ನಾಟಕದ ಗ್ರಾಮೀಣ ಜನರ ಬದುಕುವ ಹಕ್ಕನ್ನು ರಕ್ಷಿಸುವ ದೃಷ್ಟಿಯಿಂದ, ಈ ಸದನವು ಕೇಂದ್ರ ಸರ್ಕಾರವನ್ನು ತಕ್ಷಣವೇ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್(ಗ್ರಾಮೀಣ) (ವಿಬಿ-ಗ್ರಾಮ್-ಜಿ) ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತದೆ ಎಂದು ಸಿಎಂ ಹೇಳಿದರು.
ವಿಬಿ-ಜಿ ರಾಮ್ ಜಿ ಕಾಯ್ದೆ ಫೆಡರಲ್ ತತ್ವಕ್ಕೆ ವಿರುದ್ಧವಾಗಿದೆ. ರಾಜ್ಯ ಖಜಾನೆಗೆ ತೀವ್ರ ಹೊರೆಯಾಗಿದೆ ಮತ್ತು ವಿಕೇಂದ್ರೀಕರಣದ ತತ್ವಕ್ಕೆ ವಿರುದ್ಧವಾಗಿದೆ. ಗ್ರಾಮ ಪಂಚಾಯತ್‌ಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿದೆ. ಹೀಗಾಗಿ ಈ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಸಿಎಂ ಆಗ್ರಹಿಸಿದರು.
ಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ ಮನರೇಗಾ ಕಾಯ್ದೆಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
ಭಾರತೀಯ ಪ್ರಜಾಪ್ರಭುತ್ವದ ಆಧಾರಸ್ತಂಭವಾಗಿರುವ ಪಂಚಾಯತ್ ರಾಜ್ ವ್ಯವಸ್ಥೆ ಮತ್ತು ಅಧಿಕಾರ ವಿಕೇಂದ್ರೀಕರಣದ ತತ್ವಗಳಿಗೆ ವಿಧಾನಸಭೆಯು ತನ್ನ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ಹೇಳಿದ ಅವರು, "ಗ್ರಾಮೀಣ ಬಡವರಿಗೆ ಸಂಜೀವಿನಿ (ಜೀವನ ನೀಡುವ ವಿಷಯ) ಮತ್ತು ಗ್ರಾಮೀಣ ಜೀವನದ ಅವಿಭಾಜ್ಯ ಅಂಗವಾಗಿದ್ದ MGNREGA ರದ್ದತಿಯನ್ನು ಈ ಸದನವು ಗಂಭೀರವಾಗಿ ಪರಿಗಣಿಸುತ್ತದೆ" ಎಂದು ಹೇಳಿದರು.
"ಈ ಸದನವು ಕೇಂದ್ರದ ಈ ಕ್ರಮವನ್ನು (MGNREGA ರದ್ದುಗೊಳಿಸಿ VB-G RAM G ಕಾಯ್ದೆ ಜಾರಿ) ಬಲವಾಗಿ ವಿರೋಧಿಸುತ್ತದೆ" ಎಂದು ಅವರು ಹೇಳಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ ನೇತೃತ್ವದ ಬಿಜೆಪಿ ಸದಸ್ಯರು ತಕ್ಷಣ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, "ಸದನವು ಇದನ್ನು ಬಲವಾಗಿ ವಿರೋಧಿಸುತ್ತದೆ ಎಂದು ಹೇಳಬೇಡಿ, ಕಾಂಗ್ರೆಸ್ ವಿರೋಧಿಸುತ್ತದೆ ಎಂದು ಹೇಳಿ ಎಂದರು.
" ಆದಾಗ್ಯೂ, ಮುಖ್ಯಮಂತ್ರಿಗಳು ನಿರ್ಣಯವನ್ನು ಓದುವುದನ್ನು ಮುಂದುವರೆಸಿದರು, ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ವಿರೋಧ ಪಕ್ಷದ ಸದಸ್ಯರು ತಮ್ಮ ಆಕ್ಷೇಪಣೆಗಳನ್ನು ಎತ್ತಬಹುದು ಎಂದು ಹೇಳಿದರು.
ಇದು ವಿರೋಧ ಪಕ್ಷದ ಸದಸ್ಯರನ್ನು ಕೆರಳಿಸಿತು, ಅವರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



