ಪ್ರಯಾಣಿಕರಿಗೆ ಶಾಕ್: ಮೆಟ್ರೋ ರೈಲು ಟಿಕೆಟ್ ದರ ಏರಿಕೆಗೆ ಸರ್ಕಾರ ಅಸ್ತು!; ಫೆಬ್ರವರಿ 9 ರಿಂದಲೇ ಜಾರಿ ಸಾಧ್ಯತೆ
ಹಾಲಿ ಇರುವ ದರದಲ್ಲಿ ಶೇ.5ರಷ್ಟು ಏರಿಕೆ ಮಾಡಲು ಬಿಎಂಆರ್ ಸಿಎಲ್ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಇದೀಗ ಈ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಹೇಳಲಾಗಿದೆ.

ಬೆಂಗಳೂರು: ಮೆಟ್ರೋ ರೈಲು ಪ್ರಯಾಣಿಕರಿಗೆ ಸರ್ಕಾರ ಶಾಕ್ ನೀಡಿದ್ದು, ಮತ್ತೆ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ ಎಂದು ಹೇಳಲಾಗಿದೆ.
ಮೆಟ್ರೋ ರೈಲು ದರ ಏರಿಸುವ ಕುರಿತ ಬೆಂಗಳೂರು ಮೆಟ್ರೋ ರೈಲು ನಿಗಮದ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಬುಧವಾರ ಅನುಮೋದನೆ ನೀಡಿದೆ. ಅದರಂತೆ ಮೆಟ್ರೋ ರೈಲು ಟಿಕೆಟ್ ದರ ಏರಿಕೆಯಾಗಲಿದೆ.
ಮೂಲಗಳ ಪ್ರಕಾರ ಹಾಲಿ ಇರುವ ದರದಲ್ಲಿ ಶೇ.5ರಷ್ಟು ಏರಿಕೆ ಮಾಡಲು ಬಿಎಂಆರ್ ಸಿಎಲ್ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಇದೀಗ ಈ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಹೇಳಲಾಗಿದೆ.
ಮೆಟ್ರೋ ದರ ನಿಗದಿ ಸಮಿತಿಯ ಶಿಫಾರಸ್ಸಿನ ಮೇರೆಗೆ ಪ್ರತಿವರ್ಷವೂ ದರ ಪರಿಷ್ಕರಣೆ ಮಾಡುವ ಪ್ರಸ್ತಾವನೆ ಇರುವುದರಿಂದ, ಈ ಬಾರಿ ಕೂಡ ದರ ಏರಿಕೆ ಅನಿವಾರ್ಯ ಎನ್ನಲಾಗಿತ್ತು.
ಅದರಂತೆ ಸಮಿತಿಯ ಶಿಫಾರಸ್ಸಿನ ಮೇರೆಗೆ ಕನಿಷ್ಠ ಶೇ.5ರಷ್ಟು ಪ್ರಯಾಣ ದರ ಹೆಚ್ಚಳ ಮಾಡಲಾಗಿದೆ ಎನ್ನಲಾಗಿದೆ.
ಫೆ.9ರಿಂದಲೇ ಜಾರಿ
ಇನ್ನು ನೂತನ ದರಗಳು ಇದೇ ಫೆಬ್ರವರಿ 5 ಅಂದರೆ ಸೋಮವಾರದಿಂದಲೇ ನೂತನ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಮೆಟ್ರೋ ರೈಲು ನಿಗಮ ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ.
ಹಿಂದೆ ವ್ಯಾಪಕ ವಿರೋಧ
ಈ ಹಿಂದೆ ಮೆಟ್ರೋ ದರದಲ್ಲಿ ಭಾರೀ ಏರಿಕೆ ಮಾಡಿದಾಗ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕೆಲ ಮಾರ್ಗಗಳಲ್ಲಿ ಶೇ.೭೧ರಷ್ಟು ದರ ಏರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಅದರಿಂದಾಗಿ ಜನ ಸಾಮಾನ್ಯರು ಇನ್ನೂ ಚೇತರಿಸಿಕೊಳ್ಳದೇ ಇರುವ ಸ್ಥಿತಿಯಲ್ಲಿದ್ದಾರೆ.
ದಿನನಿತ್ಯ ಕೆಲಸ, ವಿದ್ಯಾಭ್ಯಾಸ ಹಾಗೂ ವ್ಯಾಪಾರಕ್ಕಾಗಿ ಮೆಟ್ರೋ ಅವಲಂಬಿಸಿರುವ ಪ್ರಯಾಣಿಕರಿಗೆ ಆ ದರ ಏರಿಕೆ ದೊಡ್ಡ ಹೊಡೆತವಾಗಿತ್ತು. ಇದೀಗ ಮತ್ತೆ ದರ ಏರಿಕೆ ಮಾಡಿದರೆ ಸಾಮಾನ್ಯ ಜನರ ಮೇಲೆ ಮತ್ತೊಂದು ಭಾರೀ ಆರ್ಥಿಕ ಒತ್ತಡ ಬೀಳಲಿದೆ ಎಂಬ ಆತಂಕ ವ್ಯಕ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



