ನಜೀರ್ ಅಹ್ಮದ್ ವಿರುದ್ಧ 'ಅವಹೇಳನಕಾರಿ ಹೇಳಿಕೆ': ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅಮಾನತು
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಹ್ಮದ್ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸಿಟಿ ರವಿ ಎರಡು ದಿನಗಳ ಹಿಂದೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಬೆಂಗಳೂರು: ಕಾಂಗ್ರೆಸ್ ಸದಸ್ಯ ನಜೀರ್ ಅಹ್ಮದ್ ವಿರುದ್ಧ 'ಅವಹೇಳನಕಾರಿ ಹೇಳಿಕೆ' ನೀಡಿದ ಆರೋಪದ ಮೇಲೆ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನದ ಕೊನೆಯ ದಿನದಂದು ಅಮಾನತುಗೊಳಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಹ್ಮದ್ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸಿಟಿ ರವಿ ಎರಡು ದಿನಗಳ ಹಿಂದೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.
ಈ ಹೇಳಿಕೆಯನ್ನು 'ಆಕ್ಷೇಪಾರ್ಹ' ಎಂದು ಪರಿಗಣಿಸಿದ ಪರಿಷತ್ತಿನ ಕಾಂಗ್ರೆಸ್ ಸದಸ್ಯರು, ಸಿಟಿ ರವಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಬುಧವಾರ, ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಕೇವಲ ಒಂದು ಗಂಟೆಗೂ ಮೊದಲು, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಟಿ ರವಿ ಅವರನ್ನು ದಿನದ ಮಟ್ಟಿಗೆ ಸದನದಿಂದ ಅಮಾನತುಗೊಳಿಸಿರುವುದಾಗಿ ಘೋಷಿಸಿದರು.
ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಂಗ್ರೆಸ್ ಎಂಎಲ್‌ಸಿ ನಜೀರ್ ಅಹ್ಮದ್ ಅಮಾನತಿಗೆ ಬಿಜೆಪಿ ಒತ್ತಾಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


