₹23.78 ಲಕ್ಷ ದುರುಪಯೋಗ: ವಿಕ್ಟೋರಿಯಾ ಆಸ್ಪತ್ರೆಯ ಎಂಟು ಹೊರಗುತ್ತಿಗೆ ಸಿಬ್ಬಂದಿ ವಿರುದ್ಧ FIR ದಾಖಲು
ಆರೋಪಿಗಳನ್ನು ಪ್ರೀತಿ, ಪುನಿತಾ, ಸಲ್ಮಾ, ಸತ್ಯ, ಶಶಿಕಲಾ, ಲಕ್ಷ್ಮಿಕಾಂತಮ್ಮ, ದರ್ಶನ್ ಮತ್ತು ಮಹೇಂದ್ರ ಎಂದು ಗುರುತಿಸಲಾಗಿದೆ.

ಬೆಂಗಳೂರು: ರಕ್ತ ಪರೀಕ್ಷೆಗಾಗಿ ರೋಗಿಗಳಿಂದ ಸಂಗ್ರಹಿಸಲಾದ ₹23.78 ಲಕ್ಷ ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪದ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ಇನ್ಫೋಸಿಸ್ ಲ್ಯಾಬ್ ಬಿಲ್ಲಿಂಗ್ ಕೌಂಟರ್‌ನಲ್ಲಿ ಕೆಲಸ ಮಾಡುತ್ತಿರುವ ಎಂಟು ಹೊರಗುತ್ತಿಗೆ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ಆರೋಪಿಗಳು ಡೇಟಾ ಎಂಟ್ರಿ ಆಪರೇಟರ್‌ಗಳಾಗಿದ್ದು, ತಮ್ಮ UPI QR ಕೋಡ್ ಅನ್ನು ಇಡುವ ಮೂಲಕ ರೋಗಿಗಳಿಂದ ಬರುವ ಹಣ ವೈಯಕ್ತಿಕ ಖಾತೆಗೆ ಬರುವಂತೆ ನೋಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ದೀಪಕ್ ಎಸ್ ನೀಡಿರುವ ದೂರಿನ ಮೇರೆಗೆ ಫೆಬ್ರುವರಿ 3 ರಂದು ವಿಶ್ವೇಶ್ವರಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2025ರ ಜನವರಿ 1 ರಿಂದ ಮೇ 31ರ ನಡುವೆ ಆಸ್ಪತ್ರೆ ಆವರಣದಲ್ಲಿರುವ ಇನ್ಫೋಸಿಸ್ ಲ್ಯಾಬ್ ಕೌಂಟರ್‌ನಲ್ಲಿ ಈ ಅಪರಾಧ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ವಿಕ್ಟೋರಿಯಾ ಆಸ್ಪತ್ರೆಯ ಇನ್ಫೋಸಿಸ್ ಲ್ಯಾಬ್ ಬಿಲ್ಲಿಂಗ್ ಕೌಂಟರ್‌ಗಳಲ್ಲಿ, ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಆರೋಪಿಗಳು, ವಿವಿಧ ರಕ್ತ ಪರೀಕ್ಷೆಗಳಿಗಾಗಿ ರೋಗಿಗಳಿಂದ ಹಣವನ್ನು ಸಂಗ್ರಹಿಸಿದ್ದಾರೆ. ಸಂಗ್ರಹಿಸಿದ ₹23,78,693 ಹಣವನ್ನು ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ' ಎಂದು ಡಾ. ದೀಪಕ್ ಎಸ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿಗಳನ್ನು ಪ್ರೀತಿ, ಪುನಿತಾ, ಸಲ್ಮಾ, ಸತ್ಯ, ಶಶಿಕಲಾ, ಲಕ್ಷ್ಮಿಕಾಂತಮ್ಮ, ದರ್ಶನ್ ಮತ್ತು ಮಹೇಂದ್ರ ಎಂದು ಗುರುತಿಸಲಾಗಿದೆ.
ಆಸ್ಪತ್ರೆಯ ಸೂಪರಿಂಟೆಂಡೆಂಟ್‌ನಿಂದ ಬಂದ ದೂರಿನ ಆಧಾರದ ಮೇಲೆ, ಆರೋಪಿಗಳ ವಿರುದ್ಧ ವಂಚನೆ ಮತ್ತು ಕ್ರಿಮಿನಲ್ ನಂಬಿಕೆ ಉಲ್ಲಂಘನೆಗಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸದ್ಯ ಈ ಪ್ರಕರಣ ತನಿಖೆ ಹಂತದಲ್ಲಿದ್ದು, ಹಣಕಾಸಿನ ದಾಖಲೆಗಳು ಮತ್ತು ಹೇಳಿಕೆಗಳನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



