ರಾಜ್ಯ

ನೆಲಮಂಗಲ ಬಳಿ ಹೊತ್ತಿ ಉರಿದ ಖಾಸಗಿ ಬಸ್ ಸಂಪೂರ್ಣ ಭಸ್ಮ: 40 ಪ್ರಯಾಣಿಕರು ಬಚಾವ್; Video

ಸಂಜನಾ ಟ್ರಾವೆಲ್ಸ್ ಗೆ ಸೇರಿದ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡು ಸಂಪೂರ್ಣ ಬಸ್ ಸುಟ್ಟು ಕರಕಲಾಗಿದೆ.

ನೆಲಮಂಗಲ ಬಳಿ ಹೊತ್ತಿ ಉರಿದ ಖಾಸಗಿ ಬಸ್ ಸಂಪೂರ್ಣ ಭಸ್ಮ: 40 ಪ್ರಯಾಣಿಕರು ಬಚಾವ್; Video
ಬಸ್ ಗೆ ಬೆಂಕಿ
Published On :

ರಾಜ್ಯದಲ್ಲಿ ಸರಣಿ ಬಸ್ ಬೆಂಕಿ ಅವಘಡ ಮುಂದುವರಿದಿದೆ. ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿ 40 ಪ್ರಯಾಣಿಕರಿದ್ದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಬೆಂಕಿ ಹತ್ತಿಕೊಂಡು ಸಂಪೂರ್ಣ ಕರಕಲಾಗಿ ಸುಟ್ಟು ಹೋಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಸಂಜನಾ ಟ್ರಾವೆಲ್ಸ್ ಗೆ ಸೇರಿದ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡು ಸಂಪೂರ್ಣ ಬಸ್ ಸುಟ್ಟು ಕರಕಲಾಗಿದೆ.

ತುಮಕೂರು - ಬೆಂಗಳೂರು ಹೆದ್ದಾರಿಯಲ್ಲಿ ಇಂದು ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ‘ಸಂಜನಾ ಟ್ರಾವೆಲ್ಸ್’ಗೆ ಸೇರಿದ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ.

ಹೆದ್ದಾರಿ ಕಾಮಗಾರಿ ಹಿನ್ನೆಲೆ ಬಸ್ ನಿಧಾನವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಬಸ್ ಹೊತ್ತಿ ಉರಿದು ಬಸ್ ನಲ್ಲಿದ್ದ ಲಗೇಜ್, ಬೆಲೆಬಾಳುವ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಬಂದ ನೆಲಮಂಗಲ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ನೆಲಂಮಗಲ ಸಂಚಾರಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.