ಬೆಂಗಳೂರು: ಉದ್ಯಮಿ ಕಿಡ್ನಾಪ್ ಪ್ರಕರಣ; ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಬಂಧನ
ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಆ ಪ್ರಕರಣದಲ್ಲಿ ಯಶಸ್ವಿನಿಗೌಡ ಅವರ ಪಾತ್ರವಿರುವುದು ಕಂಡಬಂದಿತ್ತು.

ಬೆಂಗಳೂರು: ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿಗೆ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡಳನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6.30ರ ಸುಮಾರಿಗೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಆ ಪ್ರಕರಣದಲ್ಲಿ ಯಶಸ್ವಿನಿಗೌಡ ಅವರ ಪಾತ್ರವಿರುವುದು ಕಂಡಬಂದಿತ್ತು. ಕೋಕಾ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ತನಿಖೆಯಲ್ಲಿ ರೌಡಿಶೀಟರ್ ಬೇಕರಿ ರಘು ಕೈವಾಡ ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ, ಆತನನ್ನು ಸಹ ಇತ್ತೀಚೆಗೆ ಮಂಡ್ಯದಲ್ಲಿ ಬಂಧಿಸಲಾಗಿತ್ತು. ಆಗ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇಲೆ ಯಶಸ್ವಿನಿ ಗೌಡ ವಿರುದ್ಧ ಮಂಡ್ಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಉದ್ಯಮಿ ಮನೋಜ್ ಕುಮಾರ್ ಅವರಿಗೆ ಪರಿಚಿತನಾಗಿದ್ದ ರಾಜೇಶ್ ಖ್ಯಾತ ಸಿನಿಮಾ ನಿರ್ದೇಶಕರೊಬ್ಬರಿಗೆ 1.20 ಲಕ್ಷ ರೂಪಾಯಿ ಸಾಲ ಕೊಡಿಸಿದ್ದ. ಆದರೆ ಒಂದು ವರ್ಷ ಕಳೆದರೂ ಸಾಲದ ಹಣವನ್ನು ನಿರ್ದೇಶಕ ಹಿಂತಿರುಗಿಸದಿದ್ದಾಗ ರಾಜೇಶ್ ಮೇಲೆ ಮನೋಜ್ ಕುಮಾರ್ ಒತ್ತಡ ಹೇರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



