ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಯ ಮೊದಲ ಹಂತ 18 ತಿಂಗಳಲ್ಲಿ ಪೂರ್ಣ: ಡಿ.ಕೆ ಶಿವಕುಮಾರ್
ಯೋಜನೆಗಾಗಿ ಭೂಮಿ ನೀಡಿದ ಭೂಮಾಲೀಕರಿಗೆ ಸರ್ಕಾರ ವಿವಿಧ ರೀತಿಯ ಪರಿಹಾರ ವ್ಯವಸ್ಥೆಗಳನ್ನು ಕಲ್ಪಿಸಿದೆ. ಕೆಲವು ಭೂಮಾಲೀಕರು ಶೇ.35ರಷ್ಟು ವಾಣಿಜ್ಯ ಬಳಕೆಯ ಭೂಮಿಯನ್ನು ಪರಿಹಾರವಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು ಬಿಸಿನೆಸ್ ಕಾರಿಡಾರ್ (BBC) ಯೋಜನೆಯ ಮೊದಲ ಹಂತವನ್ನು ಮುಂದಿನ ಒಂದುೂವರೆ ವರ್ಷಗಳೊಳಗೆ (18 ತಿಂಗಳು) ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ಗುರುವಾರ ತಿಳಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉತ್ತರ ಮತ್ತು ದಕ್ಷಿಣ ಕಾರಿಡಾರ್‌ಗಳಿಗೆ ಭೂಸ್ವಾಧೀನಗೊಂಡ ಭೂಮಿಯ ಮಾಲೀಕರಿಗೆ ಪರಿಹಾರ ಮೊತ್ತದ ಚೆಕ್, ಪ್ರಮಾಣಪತ್ರಗಳು ಹಾಗೂ ಟಿಡಿಎಸ್ ವಿತರಿಸಲಾಗಿದೆ ಎಂದು ಹೇಳಿದರು.
ಯೋಜನೆಗಾಗಿ ಭೂಮಿ ನೀಡಿದ ಭೂಮಾಲೀಕರಿಗೆ ಸರ್ಕಾರ ವಿವಿಧ ರೀತಿಯ ಪರಿಹಾರ ವ್ಯವಸ್ಥೆಗಳನ್ನು ಕಲ್ಪಿಸಿದೆ. ಕೆಲವು ಭೂಮಾಲೀಕರು ಶೇ.35ರಷ್ಟು ವಾಣಿಜ್ಯ ಬಳಕೆಯ ಭೂಮಿಯನ್ನು ಪರಿಹಾರವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ನಗದು ಪರಿಹಾರವನ್ನು ಸ್ವೀಕರಿಸಿದ್ದಾರೆ.
ಭೂ ಮಾಲೀಕರಿಗೆ ಮಾರುಕಟ್ಟೆ ಮೌಲ್ಯದ ಮೂರು ಪಟ್ಟು ಹೆಚ್ಚು ಪರಿಹಾರ ನೀಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯೊಳಗಿನ ಆಸ್ತಿಗೆ ಮಾರುಕಟ್ಟೆ ಮೌಲ್ಯದ ಎರಡು ಪಟ್ಟು ಪರಿಹಾರ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಈವರೆಗೆ 650ಕ್ಕೂ ಹೆಚ್ಚು ಭೂಮಾಲೀಕರು ಸ್ವಯಂಪ್ರೇರಿತವಾಗಿ ತಮ್ಮ ಭೂಮಿಯನ್ನು ಯೋಜನೆಗಾಗಿ ನೀಡಲು ಒಪ್ಪಿಕೊಂಡಿದ್ದಾರೆ. ಅವರಲ್ಲಿ 400ಕ್ಕೂ ಹೆಚ್ಚು ಭೂಮಾಲೀಕರಿಗೆ ಈಗಾಗಲೇ ಪರಿಹಾರ ವಿತರಿಸಲಾಗಿದೆ ಎಂದು ಅವರು ಹೇಳಿದರು.
ಟಿಡಿಆರ್ ಸಂಬಂಧಿತ ಸಮಸ್ಯೆಗಳ ಬಗ್ಗೆ ಮಾತನಾಡಿ, ಬಿಡಿಎ ಹಾಗೂ ಜಿಬಿಎ ವ್ಯಾಪ್ತಿಯೊಳಗಿನ ಭೂಮಿಗೆ ಸಂಬಂಧಿಸಿದಂತೆ 10 ದಿನಗಳೊಳಗೆ ಟಿಡಿಆರ್ ಗಳನ್ನು ವಿತರಿಸಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ ದಿನೇದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿವಾರಣೆ, ವಾಣಿಜ್ಯ ಚಟುವಟಿಕೆಗಳಿಗೆ ವೇಗ ನೀಡುವುದು ಮತ್ತು ನಗರದ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದ್ದು, ಯೋಜನೆಯ ಮೊದಲ ಹಂತ ಪೂರ್ಣಗೊಂಡ ಬಳಿಕ ನಗರದ ಉತ್ತರ–ದಕ್ಷಿಣ ಸಂಪರ್ಕ ವ್ಯವಸ್ಥೆ ಮತ್ತಷ್ಟು ಸುಗಮವಾಗಲಿದೆ ಎಂಬ ನಿರೀಕ್ಷೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



