ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿ ಅಶ್ವಿನಿ ವೈಷ್ಣವ್ ಗೆ ಕುಮಾರಸ್ವಾಮಿ ಮನವಿ
ಮದ್ದೂರು ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಬಗ್ಗೆ ಮನವಿ ಮಾಡಿದ ಸಚಿವರು, ಈ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುವುದರಿಂದ ಈ ನಿಲ್ದಾಣವನ್ನು ಆಧುನೀಕರಿಸಿ ಮೇಲ್ದರ್ಜೆಗೆ ಏರಿಸಬೇಕು ಎಂದು ಕುಮಾರಸ್ವಾಮಿ ಅವರು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.

ನವದೆಹಲಿ: ಬೆಂಗಳೂರು, ಮಂಡ್ಯ, ಮೈಸೂರು ರೈಲು ಮಾರ್ಗದ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತುಕತೆ ನಡೆಸಿದರು.
ಗುರುವಾರ ಮಧ್ಯಾಹ್ನ ಸಂಸತ್ ಭವನದಲ್ಲಿರುವ ತಮ್ಮ ಕಚೇರಿಗೆ ಆಗಮಿಸಿದ ರೈಲ್ವೆ ಸಚಿವರ ಜೊತೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರು ಮುಖ್ಯವಾಗಿ ಬೆಂಗಳೂರು ನಗರದಿಂದ ಮೈಸೂರು ನಡುವೆ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಾರ್ವಜನಿಕರ ರೈಲ್ವೆ ಬೇಡಿಕೆಗಳ ಬಗ್ಗೆ ಮನವಿಗಳನ್ನು ಸಲ್ಲಿಸಿದರು.
ಮದ್ದೂರು ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಬಗ್ಗೆ ಮನವಿ ಮಾಡಿದ ಸಚಿವರು, ಈ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುವುದರಿಂದ ಈ ನಿಲ್ದಾಣವನ್ನು ಆಧುನೀಕರಿಸಿ ಮೇಲ್ದರ್ಜೆಗೆ ಏರಿಸಬೇಕು ಎಂದು ಸಚಿವ ಕುಮಾರಸ್ವಾಮಿ ಅವರು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.
ಮಂಡ್ಯದಿಂದ ತೂಬಿನಕೆರೆ, ಪಾಂಡವಪುರದಿಂದ ಕೆ.ಆರ್.ಎಸ್. ಮತ್ತು ಕೆ.ಆರ್. ಪೇಟೆ ಮತ್ತು ಮಡಿಕೇರಿ ಕಡೆಗೆ ಪ್ರಯಾಣಿಸುವ ವಾಹನಗಳು ದೊಡ್ಡಬ್ಯಾಡರಹಳ್ಳಿಯಲ್ಲಿ ತೀವ್ರ ಸಂಚಾರ ದಟ್ಟಣೆಯನ್ನು ಹೊಂದಿರುವುದರಿಂದ ಇಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಅಸ್ತಿತ್ವದಲ್ಲಿರುವ ಲೆವೆಲ್ ಕ್ರಾಸಿಂಗ್ ಪ್ರಮುಖ ಅಡಚಣೆಯಾಗಿದ್ದು, ಪ್ರಯಾಣಿಕರಿಗೆ ಆಗಾಗ್ಗೆ ವಿಳಂಬ ಮತ್ತು ಅನಾನುಕೂಲ ಉಂಟು ಮಾಡುತ್ತಿದೆ. ಇದನ್ನು ಸರಿಪಡಿಸಬೇಕು ಎಂದು ಸಚಿವರು ಮನವಿ ಮಾಡಿದರು.
ಪಾಂಡವಪುರ ಪಟ್ಟಣವು ಕೆ.ಆರ್. ಪೇಟೆ, ನಾಗಮಂಗಲ ಮತ್ತು ಶ್ರೀರಂಗಪಟ್ಟಣ ತಾಲ್ಲೂಕುಗಳ ವ್ಯಾಪಾರ ಕೇಂದ್ರ ಸ್ಥಾನವಾಗಿದ್ದು, ಕೃಷಿ ಮತ್ತು ವಾಣಿಜ್ಯ ಸರಕುಗಳ ದಕ್ಷ ಸಾಗಣೆಗೆ ಅನುಕೂಲವಾಗುವಂತೆ ರೈತರು ಮತ್ತು ವ್ಯಾಪಾರಿಗಳಿಗೆ ಸಾರಿಗೆ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಈ ಪ್ರದೇಶದಲ್ಲಿ ಒಟ್ಟಾರೆ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಪಾಂಡವಪುರದಲ್ಲಿ ಗೂಡ್ಸ್ ಯಾರ್ಡ್ ಸ್ಥಾಪನೆ ಮಾಡಬೇಕು ಎಂದು ರೈಲ್ವೆ ಸಚಿವರಿಗೆ ಮನವಿ ಮಾಡಿದರು.
ಬೆಂಗಳೂರು ಟು ಮುಂಬಯಿ ನಡುವೆ ಹೊಸ ರೈಲು, ರಾಮನಗರದಲ್ಲಿ ಒಡೆಯರ್ ಎಕ್ಸ್ ಪ್ರೆಸ್ ನಿಲುಗಡೆಗೆ ಕೇಂದ್ರಕ್ಕೆ ಮನವಿ ಮಾಡಿದ ಸಚಿವ ಹೆಚ್ ಡಿ ಕುಮಾರಸ್ವಾಮಿ
ಮದ್ದೂರು ತಾಲೂಕಿನ ಹನಕೆರೆ ಗ್ರಾಮದ ಬಳಿ ಇರುವ ಲೆವೆಲ್ ಕ್ರಾಸಿಂಗ್ (ಸಂಖ್ಯೆ 60) ಅನ್ನು ಮೇಲ್ದರ್ಜೆಗೆ ಏರಿಸಬೇಕು ಎಂದು ಸಚಿವರು ಕೋರಿದರು. ಚನ್ನಪಟ್ಟಣದಲ್ಲಿ ಬೆಂಗಳೂರು ಮತ್ತು ಮೈಸೂರು ನಡುವೆ ಸಂಚರಿಸುವ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆ ಮಾಡುವುದು ಅಗತ್ಯವಾಗಿದೆ ಎಂದು ಕುಮಾರಸ್ವಾಮಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ಬೆಂಗಳೂರು ಮತ್ತು ಮೈಸೂರು ನಡುವೆ ಸಂಚರಿಸುವ ಚಾಮುಂಡಿ ಎಕ್ಸ್‌ಪ್ರೆಸ್ ರೈಲಿನ (ಸಂಖ್ಯೆ 16215) ಬೋಗಿಗಳನ್ನು ಹೆಚ್ಚಿಸಿ ಪ್ರಯಾಣಿಕರ ಸಾಮರ್ಥ್ಯ ಹೆಚ್ಚಿಸುವ ಬಗ್ಗೆ ಕೂಡ ಸಚಿವರು ರೈಲ್ವೆ ಸಚಿವರ ಜೊತೆ ಚರ್ಚಿಸಿದರು. ಮಂಡ್ಯ ಜಿಲ್ಲೆಯ ನೊಡೇಕೊಪ್ಪಲು ಗ್ರಾಮದ ಬಳಿ ರೈಲ್ವೆ ಅಂಡರ್ ಪಾಸ್ ನಿರ್ಮಾಣದ ಬಗ್ಗೆ ಕೂಡ ಮನವಿ ಸಲ್ಲಿಕೆ. ಗ್ರಾಮಸ್ಥರು, ಮುಖ್ಯವಾಗಿ ರೈತರು ಮತ್ತು ಶಾಲಾ ಮಕ್ಕಳಿಗೆ ಈ ಅಂಡರ್ ಪಾಸ್ ನಿರ್ಮಾಣದಿಂದ ಹೆಚ್ಚು ಅನುಕೂಲ ಆಗಲಿದೆ ಎಂಬ ಅಂಶವನ್ನು ಸಚಿವರು ಮನವರಿಕೆ ಮಾಡಿಕೊಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



