ಮೆಟ್ರೋ ದರ ಏರಿಕೆ ಬಗ್ಗೆ ನಮ್ಮ ಅಭಿಪ್ರಾಯ ಕೇಳಿಲ್ಲ; ಸಿಎಂ ಆಗಬೇಕು ಎಂಬ ಕನಸು ಜನರಿಗಿದೆ: ಡಿ.ಕೆ ಶಿವಕುಮಾರ್
ನಾನು ಸಿಎಂ ಆಗಬೇಕೆಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು" ಎಂದು ತಿಳಿಸಿದರು.

ಮಂಗಳೂರು: ಮೆಟ್ರೋ ದರ ಬಗ್ಗೆ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಇದರ ಮುಖ್ಯಸ್ಥರು. ಮೆಟ್ರೋ ದರ ಏರಿಕೆ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.
ಮಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಬೆಂಗಳೂರಿಗೆ ಮರಳಿದ ಬಳಿಕ ಈ ಬಗ್ಗೆ ಚರ್ಚೆ ಮಾಡುವೆ. ಜನರಿಗೆ ತೊಂದರೆ ನೀಡಲು ನಮಗೆ ಇಷ್ಟವಿಲ್ಲ. ಆರ್ಥಿಕ ಸ್ಥಿತಿಗತಿ ಪರಿಶೀಲನೆ ಮಾಡುತ್ತೇನೆ ಎಂದು ತಿಳಿಸಿದರು.
ನೀವು ಸಿಎಂ ಆಗಬೇಕು ಎಂಬ ಕನಸು ಜನರಿಗಿದೆ ಎಂದು ಕೇಳಿದಾಗ, "ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು" ಎಂದು ತಿಳಿಸಿದರು. ದಲಿತ ಸಂಘಟನೆಗಳು ಪರಮೇಶ್ವರ್ ಅವರು ಸಿಎಂ ಆಗಬೇಕು ಎಂದು ಆಸೆ ಪಟ್ಟಿರುವ ಬಗ್ಗೆ ಕೇಳಿದಾಗ, "ಅವರವರ ಅಭಿಮಾನಿಗಳು ಆಸೆ ಪಡುತ್ತಾರೆ. ಅದನ್ನು ನಾನು ಬೇಡ ಎಂದು ಹೇಳಲು ಆಗುವುದಿಲ್ಲ" ಎಂದರು.
ಸಮಯವೇ ಉತ್ತರ ನೀಡುತ್ತದೆ
ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆ ಆಗುವುದೇ ಎಂದು ಕೇಳಿದಾಗ, "ಸಮಯವೇ ಉತ್ತರ ನೀಡಲಿದೆ" ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



