ರಾಜ್ಯ

ಕೇರಳ: ಸಿಜೆ ರಾಯ್ ಬೆನ್ನಲ್ಲೇ ಕರ್ನಾಟಕ ಮೂಲದ ಮತ್ತೊಬ್ಬ ಉದ್ಯಮಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!

ಕರ್ನಾಟಕ ಮೂಲದ ಉದ್ಯಮಿಯೊಬ್ಬರು ಕೇರಳದ ವಯನಾಡಿನಲ್ಲಿ ಕಾರಿನಲ್ಲಿ ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಕೊಡಗಿನ ಪೊನ್ನಂಪೇಟೆಯ ಕುಟ್ಟ ಗ್ರಾಮದ ನಿವಾಸಿ ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ.

ಕೇರಳ: ಸಿಜೆ ರಾಯ್ ಬೆನ್ನಲ್ಲೇ ಕರ್ನಾಟಕ ಮೂಲದ ಮತ್ತೊಬ್ಬ ಉದ್ಯಮಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!
ಸಜೀರ್ ಆತ್ಮಹತ್ಯೆ
Published On :

ಕೊಡಗು/ವಾಯನಾಡು: ಕರ್ನಾಟಕ ಮೂಲದ ಉದ್ಯಮಿಯೊಬ್ಬರು ಕೇರಳದ ವಯನಾಡಿನಲ್ಲಿ ಕಾರಿನಲ್ಲಿ ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಕೊಡಗಿನ ಪೊನ್ನಂಪೇಟೆಯ ಕುಟ್ಟ ಗ್ರಾಮದ ನಿವಾಸಿ ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ. ಆದರೆ ಅದೃಷ್ಟವಶಾತ್ ಸಜೀರ್ ನ ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆದರೆ ಸಜೀರ್ ಪತ್ನಿ ಗಂಭೀರ ಗಾಯವಾಗಿದ್ದು, ಕಲ್ಲಿಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ. ಕುಟ್ಟ ಗ್ರಾಮದಲ್ಲಿ ಸಜೀರ್ ಹಲವು ವ್ಯಾಪಾರ ಮಳಿಗೆ ಹೊಂದಿದ್ದರು. ಬಾಪು ಎಂಬಾತ ಸಜೀರ್​​ ಬಳಿ 20 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಪಡೆದಿದ್ದ ಹಣವನ್ನು ಬಾಪು ವಾಪಸ್ ಕೊಡದಿದ್ದಕ್ಕೆ ಆತನ ಮನೆ ಎದುರೇ ಸಜೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಆತ್ಮಹತ್ಯೆಗೂ ಮುನ್ನ ಸಜೀರ್​ ವಿಡಿಯೋ ರೆಕಾರ್ಡ್ ಮಾಡಿದ್ದು ನಮ್ಮ ಸಾವಿಗೆ ಬಾಪು ಕಾರಣ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.