ರಾಜ್ಯ

ಹುಬ್ಬಳ್ಳಿ: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಯೋಜನೆ; ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

200 ಕೋಟಿ ರೂ. ವೆಚ್ಚದಲ್ಲಿ ಬೆಣ್ಣೆಹಳ್ಳ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಪ್ರಾರಂಭಕ್ಕೆ ಶಾಸಕ ಎನ್.ಎಚ್. ಕೋನರಡ್ಡಿ ಅವರ ಒತ್ತಾಸೆ ಕಾರಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಹುಬ್ಬಳ್ಳಿ: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಯೋಜನೆ; ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
ಸಿಎಂ ಸಿದ್ದರಾಮಯ್ಯ ಮತ್ತಿತರರು
Published On :

ಹುಬ್ಬಳ್ಳಿ: ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ, 200 ಕೋಟಿ ರೂ. ವೆಚ್ಚದಲ್ಲಿ ಬೆಣ್ಣೆಹಳ್ಳ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಪ್ರಾರಂಭಕ್ಕೆ ಶಾಸಕ ಎನ್.ಎಚ್. ಕೋನರಡ್ಡಿ ಅವರ ಒತ್ತಾಸೆ ಕಾರಣ. ಈ ಹಿಂದೆ 1610 ಕೋಟಿ ರೂ. ಅಂದಾಜು ವೆಚ್ಚದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ವಿಳಂಬ ಮಾಡಿದ ನಂತರ 200 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗುತ್ತಿದೆ. ಜೊತೆಗೆ .150 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ ಎಂದು ಸುಳ್ಳು ಹರಡಲಾಗುತ್ತಿದೆ. ಆದರೆ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. 2018 ರಲ್ಲಿ ಸುಪ್ರೀಂ ಕೋರ್ಟ್ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ಸೂಚಿಸಿದೆ. ಈಗಾಗಲೇ ಕಳಸಾ ಬಂಡೂರಿ ಯೋಜನೆಗೆ ಟೆಂಡರ್ ಕರೆದು ಏಜೆನ್ಸಿಗೆ ಒಪ್ಪಿಸಲಾಗಿದೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ನಾಳೆನೇ ಕಾಮಗಾರಿ ಆರಂಭಿಸಲಾಗುವುದು ಎಂದರು.

ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸರ್ಕಾರದಿಂದ ನಿಂತು ಹೋಗಿದೆ. ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಮಾಡಬೇಕು. ಮೇಕೆದಾಟು ಯೋಜನೆಗೆ ಸಹ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಈಗಾಗಲೇ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. 65 ಟಿಎಂಸಿ ಕುಡಿಯುವ ನೀರಿನ ಯೋಜನೆ ಇದಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಕೊಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಯಾವುದೇ ಹಣ ಇದುವರೆಗೂ ನೀಡಿಲ್ಲ ಎಂದು ಆರೋಪಿಸಿದರು.

2005 ರಲ್ಲಿ ಮನ್ರೇಗಾ ಯೋಜನೆ ಜಾರಿ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ಕಳೆದ ಡಿಸೆಂಬರ್ ನಲ್ಲಿ ಈ ಯೋಜನೆಯನ್ನು ರದ್ದು ಮಾಡಿದೆ. ಈ ಮೂಲಕ ಯುವಕರಿಗೆ, ಮಹಿಳೆಯರಿಗೆ, ಕೆಲಸವಿಲ್ಲದವರಿಗೆ ಕೆಲಸ ಕೊಡುವ ಯೋಜನೆಯನ್ನು ಕೈ ಬಿಡಲಾಗಿದೆ. ಇದರಡಿ ಶೇ. 53 ಮಹಿಳೆಯರು, ಶೇ.17 ರಷ್ಟು ಪರಿಶಿಷ್ಟ ಜಾತಿ ಹಾಗೂ ಶೇ. 11ರಷ್ಟು ಪರಿಶಿಷ್ಟ ಪಂಗಡ ವರ್ಗದವರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲರೂ ವಿಬಿ ಜಿ ರಾಮ್ ಜಿ‌ ಇಂದ ಕೆಲಸ ಕಳೆದುಕೊಳ್ಳಲಿದ್ದಾರೆ. ಮನ್ರೇಗಾ ಯೋಜನೆಯನ್ನು ಮರುಸ್ಥಾಪನೆ ಮಾಡುವ ನಿಟ್ಟಿನಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.