ತುಮಕೂರಿನಲ್ಲಿ ಸರಣಿ ಅಪಘಾತ: ಇಬ್ಬರ ದುರ್ಮರಣ, Dysp ಸೇರಿ 9 ಮಂದಿಗೆ ಗಾಯ
ಘಟನೆಯಲ್ಲಿ ಡಿವೈಎಸ್ಪಿ ರಾಮಕೃಷ್ಣಪ್ಪ ಸೇರಿ 9 ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಗೊಂಡವರಲ್ಲಿ ಓರ್ವ ಮಹಿಳೆಯೂ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು: ತುಮಕೂರು–ಕುಣಿಗಲ್ ರಾಜ್ಯ ಹೆದ್ದಾರಿಯ ಬಾಣಾವರ ಗೇಟ್ ಸಮೀಪದ ನಾಗವಳ್ಳಿ ಗ್ರಾಮ ಬಳಿ ನಡೆದ ಸರಣಿ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಡಿವೈಎಸ್ಪಿ ಸೇರಿ ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಯಾದವನಗರದ ರಿಯಲ್ ಎಸ್ಟೇಟ್ ಉದ್ಯಮಿ ಸುರೇಶ್ (55) ಹಾಗೂ ಅಶೋಕನಗರದ ಗುತ್ತಿಗೆದಾರ ಮುರಳಿ (60) ಎಂದು ಗುರ್ತಿಸಲಾಗಿದೆ.
ಘಟನೆಯಲ್ಲಿ ಡಿವೈಎಸ್ಪಿ ರಾಮಕೃಷ್ಣಪ್ಪ ಸೇರಿ 9 ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಗೊಂಡವರಲ್ಲಿ ಓರ್ವ ಮಹಿಳೆಯೂ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗಮಂಗಲ ತಾಲೂಕು ಆದಿಚುಂಚನಗಿರಿ ಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಚಿತ್ತದುರ್ಗದಿಂದ ಮೈಸೂರು ಕಡೆ ತೆರಳುತ್ತಿದ್ದ ಕಾರೊಂದು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡಲು ಯತ್ನಿಸಿದಾಗ, ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಹೆಬ್ಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



