ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಇಬ್ಬರು ಪ್ರಯಾಣಿಕರ ಬಂಧನ, 2 ಕೋಟಿ ರೂ ಮೌಲ್ಯದ ಗಾಂಜಾ ವಶ!
ಮೊದಲನೇಯ ಪ್ರಕರಣದಲ್ಲಿ ಫೆ. 7 ರಂದು ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರೊಬ್ಬರನ್ನು ತಡೆದು 63 ಲಕ್ಷ ಮೌಲ್ಯದ 1.8 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪ್ರತ್ಯೇಕ ಘಟನೆಗಳಲ್ಲಿ 2 ಕೋಟಿ ರೂ. ಗೂ ಅಧಿಕ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಮೊದಲನೇಯ ಪ್ರಕರಣದಲ್ಲಿ ಫೆ. 7 ರಂದು ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರೊಬ್ಬರನ್ನು ತಡೆದು 63 ಲಕ್ಷ ಮೌಲ್ಯದ 1.8 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಸೂಟ್‌ಕೇಸ್‌ನ ತಳಭಾಗದಲ್ಲಿ ಗಾಂಜಾ ಇಟ್ಟು ಕಳ್ಳಸಾಗಣೆ ಮಾಡಲಾಗುತಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ಸಾಮಾಜಿಕ ಜಾಲತಾಣ 'ಎಕ್ಸ್' ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಫೆಬ್ರವರಿ 6 ರಂದು, ಹಾಂಕಾಂಗ್‌ನಿಂದ ಆಗಮಿಸಿದ ಪ್ರಯಾಣಿಕರನ್ನು ತಡೆದು ಪರಿಶೀಲನೆ ನಡೆಸಿದಾಗ ಅವರ ಬ್ಯಾಗೇಜ್‌ನಿಂದ 1.76 ಕೋಟಿ ಮೌಲ್ಯದ 5.05 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಇಬ್ಬರೂ ಆರೋಪಿಗಳನ್ನು NDPS ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



