ಅಸ್ಸಾಂ ಚುನಾವಣೆ ಸಂಬಂಧ AICC ಸಭೆಗೆ ಡಿಕೆಶಿ ದೆಹಲಿಗೆ ತೆರಳುತ್ತಿದ್ದಾರೆ, ನಾಯಕತ್ವ ಕುರಿತು ಗೊಂದಲ ಬೇಡ: ಸಿಎಂ ಸಿದ್ದರಾಮಯ್ಯ; Video
ರಾಜ್ಯದ ನಾಯಕತ್ವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಈ ವಿಷಯವನ್ನು ಪದೇಪದೇ ಕೇಳುವುದು ಬೇಡ. ಆಹ್ವಾನ ಬಂದರೆ ಮಾತ್ರ ನಾನು ದೆಹಲಿಗೆ ಹೋಗುತ್ತೇನೆ, ಆಹ್ವಾನವಿಲ್ಲದೆ ಹೋಗುವ ಅಗತ್ಯವಿಲ್ಲ.

ಬೆಂಗಳೂರು: ಅಸ್ಸಾಂ ವಿಧಾನಸಭಾ ಚುನಾವಣೆ ತಯಾರಿ ಸಂಬಂಧ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಸಭೆಗಳಲ್ಲಿ ಭಾಗವಹಿಸಲು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ (ಎಐಸಿಸಿ) ಸಭೆಗಳಲ್ಲಿ ಭಾಗವಹಿಸಲು ಡಿಕೆ. ಶಿವಕುಮಾರ್ ಇಂದು ದೆಹಲಿಗೆ ಹೋಗುತ್ತಿರುವುದಾಗಿ ನನಗೆ ಪತ್ರ ಬರೆದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಬಜೆಟ್ ಕುರಿತು ಸಭೆ ನಡೆಸಲಾಗುವುದು ಎಂದು ಹೇಳಿದರು.
ಅಧಿಕಾರ ಹಂಚಿಕೆ ಕುರಿತ ಚರ್ಚೆಗಳಿಗೆ ಪ್ರತಿಕ್ರಿಯಿಸಿ, ರಾಜ್ಯದ ನಾಯಕತ್ವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಈ ವಿಷಯವನ್ನು ಪದೇಪದೇ ಕೇಳುವುದು ಬೇಡ. ಆಹ್ವಾನ ಬಂದರೆ ಮಾತ್ರ ನಾನು ದೆಹಲಿಗೆ ಹೋಗುತ್ತೇನೆ, ಆಹ್ವಾನವಿಲ್ಲದೆ ಹೋಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್, ಪಕ್ಷದ ಕನಿಷ್ಠ 80 ಶಾಸಕರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೆಸರನ್ನು ಹೈಕಮಾಂಡ್‌ಗೆ ನೀಡಿದ್ದಾರೆ ಎಂದು ಹೇಳಿದ್ದರು.
ಇದೇ ವೇಳೆ ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗಳಿಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಪಕ್ಷದಲ್ಲಿ ಶಿಸ್ತು ಮುಖ್ಯ. ತಂದೆ-ಮಗ ಪ್ರೀತಿ ಸಹಜ, ಆದರೆ, ರಾಜಕೀಯದಲ್ಲಿ ಶಿಸ್ತಿನಿಂದ ನಡೆದುಕೊಳ್ಳಬೇಕು. ಇಂತಹ ಹೇಳಿಕೆಗಳು ಹೈಕಮಾಂಡ್‌ಗೆ ಮುಜುಗರ ಉಂಟುಮಾಡಬಾರದು ಎಂದು ತಿಳಿಸಿದರು.
ನಮ್ಮ ಹೃದಯದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಆಶಯ ಇದೆ. ಆದರೆ, ಪಕ್ಷದೊಳಗೆ ಗೊಂದಲ ಸೃಷ್ಟಿಯಾಗದಂತೆ ಎಲ್ಲರೂ ಸಂಯಮದಿಂದ ನಡೆದುಕೊಳ್ಳಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



