ವಿಧಾನಸೌಧ: ಸಚಿವ ಭೈರತಿ ಸುರೇಶ್ ಕಚೇರಿಯಲ್ಲಿ ಲಕ್ಷಾಂತರ ನಗದು, ಚಿನ್ನಾಭರಣ ಕಳ್ಳತನ!
ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಸಹಿತ ಕಚೇರಿಯಲ್ಲೇ ಮರೆತು ಹೊರಟಿದ್ದರು.

ಬೆಂಗಳೂರು: ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.
ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಸಹಿತ ಕಚೇರಿಯಲ್ಲೇ ಮರೆತು ಹೊರಟಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.
ಗಾಬರಿಗೊಂಡ ನವೀನ್ ತಕ್ಷಣ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ವೇಳೆ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ಹೊತ್ತುಕೊಂಡು ಹೋಗಿರುವುದು ಪತ್ತೆಯಾಗಿದೆ.
ತಕ್ಷಣ ಕಾರ್ಯಾಚರಣೆ ನಡೆಸಿದ ವಿಧಾನಸೌಧ ಪೊಲೀಸರು ಆರೋಪಿ ಡಿ ಗ್ರೂಪ್ ನೌಕರನನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



