ARAI ಕೇಂದ್ರಕ್ಕೆ ಮಂಡ್ಯ ಜಿಲ್ಲೆಯಲ್ಲಿ ಭೂಮಿ ಲಭ್ಯ: HDKಗೆ ಎಂ.ಬಿ ಪಾಟೀಲ್ ಪತ್ರ!
ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ಮುದ್ದನಘಟ್ಟ ಮತ್ತು ಹೆಗ್ಗಡಿತಿಹಳ್ಳಿ ವ್ಯಾಪ್ತಿಯಲ್ಲಿ 105 ಎಕರೆ ಸರಕಾರಿ ಭೂಮಿ ಲಭ್ಯವಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿಗಳು ತಿಳಿಸಿರುವುದಾಗಿ ಎಂಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ದೇಶದ ಪ್ರಪ್ರಥಮ ನಿರ್ಮಾಣ ಕಾಮಗಾರಿ ಮತ್ತು ಮೂಲಸೌಕರ್ಯ ಸಾಧನ ಪರೀಕ್ಷಾ ಮೂಲಸೌಕರ್ಯ ಕೇಂದ್ರ ನಿರ್ಮಾಣಕ್ಕೆ ತಾವು ಮಂಡ್ಯ ಜಿಲ್ಲೆಯಲ್ಲಿ ಅಪೇಕ್ಷಿಸಿದ್ದ 100 ಎಕರೆ ಜಮೀನು ಲಭ್ಯವಿದೆ.
ಈ ಸಂಬಂಧ ಭಾರತೀಯ ಆಟೋಮೋಟೀವ್ ಸಂಶೋಧನಾ ಒಕ್ಕೂಟಕ್ಕೆ (ಎ.ಆರ್.ಎ.ಐ) ಸೂಕ್ತ ನಿರ್ದೇಶನ ನೀಡಿ, ಯೋಜನಾ ಪ್ರಸ್ತಾವನೆ ಕಳಿಸಿಕೊಡಲು ಸೂಚಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.
ಕುಮಾರಸ್ವಾಮಿ ಅವರು ಈ ಸಂಬಂಧವಾಗಿ ಜ.8ರಂದು ಬರೆದಿದ್ದ ಪತ್ರಕ್ಕೆ ಸೋಮವಾರ ಉತ್ತರಿಸಿರುವ ಪಾಟೀಲರು, ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ಮುದ್ದನಘಟ್ಟ ಮತ್ತು ಹೆಗ್ಗಡಿತಿಹಳ್ಳಿ ವ್ಯಾಪ್ತಿಯಲ್ಲಿ 105 ಎಕರೆ ಸರಕಾರಿ ಭೂಮಿ ಲಭ್ಯವಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಭೂಮಿಯು ಮಂಡ್ಯ-ನಾಗಮಂಗಲ ರಾಜ್ಯ ಹೆದ್ದಾರಿಯಿಂದ ಕೇವಲ 500 ಮೀ. ದೂರದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.
ಉದ್ದೇಶಿತ ಸ್ಥಾವರ ಸ್ಥಾಪಿಸಲು ನೀವು ಕೇಳಿದ್ದಕ್ಕಿಂತ ಹೆಚ್ಚಿನ ಭೂಮಿ ಇದೆ. ಆದ್ದರಿಂದ ಎ.ಆರ್.ಎ.ಐ. ಪ್ರತಿನಿಧಿಗಳು ಮತ್ತು ನಿಮ್ಮ ಸಚಿವಾಲಯದ ತಂಡ ಎರಡೂ ರಾಜ್ಯಕ್ಕೆ ಭೇಟಿ ನೀಡಿ, ಈ ಭೂಮಿಯು ತಮಗೆ ಸೂಕ್ತವಾಗಿದೆಯೇ ಎನ್ನುವುದನ್ನು ನಿರ್ಧರಿಸಲು ಜಂಟಿ ಪರಿಶೀಲನೆ ನಡೆಸುವಂತೆ ತ್ವರಿತವಾಗಿ ಸೂಚಿಸಬೇಕು. ಇದು ಸೂಕ್ತವಾಗಿದೆ ಎನಿಸಿದರೆ, ನಂತರ ಇದನ್ನು ಉದ್ದೇಶಿತ ಸ್ಥಾವರ ಸ್ಥಾಪನೆಗೆ ಮಂಜೂರು ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಸಂಬಂಧವಾಗಿ ಎ.ಆರ್.ಎ.ಐ. ಒಕ್ಕೂಟವು ರಾಜ್ಯ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್ ಅವರೊಂದಿಗೆ ನೇರವಾಗಿ ವ್ಯವಹರಿಸಬಹುದು ಎಂದು ಪಾಟೀಲ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



