ರಾಜ್ಯ

ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲ

ಪಿ. ರಾಮಯ್ಯ ಅವರು ವಿವಿಧ ಅಂಗಾಂಗ ವೈಫಲ್ಯದಿಂದಾಗಿ ಇಂದು ರಾತ್ರಿ 9 ಗಂಟೆಗೆ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಪುತ್ರ ಡಾ ಬಾಲಾಜಿ ತಿಳಿಸಿದ್ದಾರೆ.

ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲ
ಪಿ ರಾಮಯ್ಯ
Published On :

ಬೆಂಗಳೂರು: ಹಿರಿಯ ಪತ್ರಕರ್ತ ಹಾಗು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ ರಾಮಯ್ಯ (93 )ಅವರು ಇಂದು ನಿಧನರಾಗಿದ್ದಾರೆ.

ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ. ರಾಮಯ್ಯ ಅವರು ವಿವಿಧ ಅಂಗಾಂಗ ವೈಫಲ್ಯದಿಂದಾಗಿ ಇಂದು ರಾತ್ರಿ 9 ಗಂಟೆಗೆ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಪುತ್ರ ಡಾ ಬಾಲಾಜಿ ತಿಳಿಸಿದ್ದಾರೆ .

1933 ಸೆಪ್ಟೆಂಬರ್ 12 ರಂದು ಜನಿಸಿದ ರಾಮಯ್ಯ ಅವರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗು ಸೊಸೆಯಂದಿರು ಹಾಗು ಮೊಮ್ಮಕಳನ್ನು ಅಗಲಿದ್ದಾರೆ.

ಪಿ ರಾಮಯ್ಯ ಅವರು, "ದಿ ಹಿಂದೂ " ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೆ ರಾಮಯ್ಯ ಅವರು ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗು ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ ಅವರು ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿದ್ದರು .

ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥೀವ ಶರೀರವನ್ನು ನಾಳೆ ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರ ಕ್ಲಬ್ ಸಮೀಪದಲ್ಲಿ ವಾಸವಾಗಿದ್ದ ಮನೆ 295/12/1, 7ನೇ ಮೇನ್, 16 ನೇ ಕ್ರಾಸ್ ವಿಳಾಸದಲ್ಲಿ ಇಡಲಾಗುವುದು ಎಂದು ಗಿರೀಶ್ ಲಿಂಗಣ್ಣ ಸೋದರಳಿಯ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.