ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ: ಸಬ್ ರಿಜಿಸ್ಟ್ರಾರ್ ಸೇರಿ ಇಬ್ಬರ ಬಂಧನ
ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿರು 2.1 ಎಕರೆ ಜಮೀನಿಗೆ ಬಂಧಿತರು ನಕಲಿ ದಾಖಲೆ ಸೃಷ್ಟಿಸಿ ಹುಕ್ಕೇರಿ ಉಪನೋಂದಣಿ ಕಚೇರಿಯಲ್ಲಿ ಬೇರೆ ವ್ಯಕ್ತಿಯ ಹೆಸರಿನಲ್ಲಿ ನೋಂದಣಿ ಮಾಡಿಸಿ ಮಾರಾಟ ಮಾಡಿದ್ದರು.

ಬೆಳಗಾವಿ: ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಹುಕ್ಕೇರಿ ಪೊಲೀಸರು ಸಬ್ ರಿಜಿಸ್ಟ್ರಾರ್ ಮತ್ತು ಬಾಂಡ್ ರೈಟರ್'ನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಸಬ್ ರಿಜಿಸ್ಟ್ರಾರ್ ಮಡಿವಾಳಯ್ಯ ಬಾನಿಮಠ (34) ಹಾಗೂ ಬಾಂಡ್ ರೈಟರ್ ಆನಂದ ದಡ್ಡಿಮನಿ (35) ಬಂಧಿತ ಆರೋಪಿಗಳು.
ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿರು 2.1 ಎಕರೆ ಜಮೀನಿಗೆ ಬಂಧಿತರು ನಕಲಿ ದಾಖಲೆ ಸೃಷ್ಟಿಸಿ ಹುಕ್ಕೇರಿ ಉಪನೋಂದಣಿ ಕಚೇರಿಯಲ್ಲಿ ಬೇರೆ ವ್ಯಕ್ತಿಯ ಹೆಸರಿನಲ್ಲಿ ನೋಂದಣಿ ಮಾಡಿಸಿ ಮಾರಾಟ ಮಾಡಿದ್ದರು.
ಈ ಅಕ್ರಮಕ್ಕೆ ಉಪನೋಂದಣಿ ಅಧಿಕಾರಿ ಸೇರಿ ಹಲವರು ಭಾಗಿಯಾಗಿರುವ ಕುರಿತು ಕುರಣಿವಾಡಿ ಗ್ರಾಮದ ಶಿವಾನಂದ ಮಾನಗಾಂವಿ ಎಂಬುವವರು ಹುಕ್ಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇದೇ ಪ್ರಕರಣದ ಅಡಿಯಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದರು. ಆದರೆ, ಉಪ ನೋಂದಣಿ ಅಧಿಕಾರಿ, ಬಾಂಡ್ ರೈಟರ್ ಇಬ್ಬರು ಪರಾರಿಯಾಗಿ ಜಾಮೀನಿಗೆ ಅರ್ಜಿ ಹಾಕಿದ್ದರು. ಭಾನುವಾರ ಇಬ್ಬರಿಗೆ ನ್ಯಾಯಾಲಯ ಮಂಜೂರು ಮಾಡಿತ್ತು.
ಬಳಿಕ ಪೊಲೀಸ್ ಠಾಣೆಗೆ ಇಬ್ಬರು ಹಾಜರಾಗಿ ಜಾಮೀನು ಪಡೆಯುವ ಸಂದರ್ಭದಲ್ಲಿ ಪೊಲೀಸರು ಮತ್ತೊಂದು ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿರುವ ಪ್ರಕರಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಬಳಿಕ ನ್ಯಾಯಾಲಯವು ಇಬ್ಬರನ್ನು ಗೋಕಾಕ ಸಬ್ ಜೈಲಿಗೆ ಕಳುಹಿಸಿ ವಿಚಾರಣೆ ಮುಂದೂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



