MUDA scam: 134 ಪ್ರಕರಣಗಳಿಗೆ ಮತ್ತೆ ಮರುಜೀವ; ಮತ್ತಷ್ಟು ಮಂದಿಗೆ ಲೋಕಾಯುಕ್ತ ನೋಟಿಸ್
ಹಗರಣಕ್ಕೆ ಸಂಬಂಧಿಸಿದ 134 ಪ್ರಕರಣಗಳಿಗೆ ತನಿಖೆಯನ್ನು ಲೋಕಾಯುಕ್ತ ಪುನರಾರಂಭಿಸಿದ್ದು, ಸೈಟ್ ಪಡೆದ 40ಕ್ಕೂ ಹೆಚ್ಚು ಮಂದಿಗೆ ನೋಟಿಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಮೈಸೂರು: ವಿವಾದಾತ್ಮಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) 50:50 ನಿವೇಶನ ಹಂಚಿಕೆ ಹಗರಣ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಕರಣದ ತನಿಖೆ ಪುನರಾರಂಭವಾಗಿದ್ದು, ಇದು ಸೈಟ್ ಮಾರಾಟಗಾರರು ಹಾಗೂ ಲಾಭ ಪಡೆದವರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.
ಹಗರಣಕ್ಕೆ ಸಂಬಂಧಿಸಿದ 134 ಪ್ರಕರಣಗಳಿಗೆ ತನಿಖೆಯನ್ನು ಲೋಕಾಯುಕ್ತ ಪುನರಾರಂಭಿಸಿದ್ದು, ಸೈಟ್ ಪಡೆದ 40ಕ್ಕೂ ಹೆಚ್ಚು ಮಂದಿಗೆ ನೋಟಿಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಹಗರಣವು 1,055 ಸೈಟ್‌ಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದ್ದು, ಇದರಿಂದ ರಾಜ್ಯಕ್ಕೆ ಸಾವಿರಾರು ಕೋಟಿ ರೂಪಾಯಿ ಹಣಕಾಸು ನಷ್ಟ ಉಂಟಾಗಿದೆ ಎನ್ನಲಾಗಿದೆ.
ಸೈಟ್ ಹಂಚಿಕೆಯಲ್ಲಿ ಕಾನೂನು ಉಲ್ಲಂಘನೆ ಮತ್ತು ಅಧಿಕಾರ ದುರುಪಯೋಗ ನಡೆದಿದೆಯೇ ಎಂಬುದನ್ನು ಲೋಕಾಯುಕ್ತ ಪರಿಶೀಲಿಸುತ್ತಿದೆ.
ಇದರಂತೆ ಮುಡಾದ ಮಾಜಿ ಆಯುಕ್ತರಾದ ದಿನೇಶ್, ನಟೇಶ್ ಸೇರಿದಂತೆ ಹಲವು ಅಧಿಕಾರಿಗಳು, ಇತರರಿಗೆ ನೋಟಿಸ್ ಜಾರಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಅವರು, ಆರೋಪಿಗಳು ಮತ್ತು ಲಾಭಪಡೆದವವರಿಗೆ ಸಮನ್ಸ್ ನೀಡಿ, ತನಿಖೆಗೆ ಸಹಕರಿಸಿ ಅಗತ್ಯ ದಾಖಲೆಗಳು ಮತ್ತು ಸ್ಪಷ್ಟೀಕರಣ ನೀಡುವಂತೆ ಸೂಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



