ರಾಜ್ಯ

ರಾಹುಲ್ ಗಾಂಧಿ ಫೋಟೋ ಎಡಿಟ್ ಮಾಡಿ ಅವಹೇಳನ: ಶಾಸಕ ಆರಗ ಜ್ಞಾನೇಂದ್ರ PA ಬಂಧನ

ಹೊಸನಗರ ತಾಲೂಕಿನ ಮಳಲಿ ಗ್ರಾಮದ ನಿವಾಸಿ ಹಾಗೂ ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಗೆ ಫೆಬ್ರವರಿ 24, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ರಾಹುಲ್ ಗಾಂಧಿ ಫೋಟೋ ಎಡಿಟ್ ಮಾಡಿ ಅವಹೇಳನ: ಶಾಸಕ ಆರಗ ಜ್ಞಾನೇಂದ್ರ PA ಬಂಧನ
ರಾಜೇಶ್ ಹಿರಿಮನೆ
Published On :

ಶಿವಮೊಗ್ಗ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸನಗರ ತಾಲೂಕಿನ ಮಳಲಿ ಗ್ರಾಮದ ನಿವಾಸಿ ಹಾಗೂ ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಗೆ ಫೆಬ್ರವರಿ 24, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ರಾಜೇಶ್ ಹಿರಿಮನೆ ರಾಹುಲ್ ಗಾಂಧಿ ಅವರ ಮುಖದ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ‘ಅಸಿಮ್’ ಫೋಟೋವನ್ನು ಎಡಿಟ್ ಮಾಡಿ ಒಂದಕ್ಕೊಂದು ಸೇರಿಸಿದ್ದರು. ಈ ವಿವಾದಾತ್ಮಕ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್ ಲೈನ್ ನೀಡಿ ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿತ್ತು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಆಕ್ಷೇಪಾರ್ಹ ಪೋಸ್ಟ್ ಗಮನಿಸಿದ ಹೊಸನಗರ-ನಗರ ಪೊಲೀಸರು, ಮೇ 20, 2025 ರಂದೇ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.