ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿದ್ದ 22 ವರ್ಷದ ಕರ್ನಾಟಕದ ವಿದ್ಯಾರ್ಥಿ ನಾಪತ್ತೆ!
ಸಾಕೇತ್ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ MS ಓದುತ್ತಿದ್ದರು. ಕಳೆದ ಎರಡು ದಿನಗಳಿಂದ ಅವರಿಗೆ ಯಾರೊಂದಿಗೂ ಸಂಪರ್ಕ ಸಾಧ್ಯವಾಗಿಲ್ಲ ಎಂದು ಕುಟುಂಬಸ್ಥರು ಮತ್ತು ಸ್ನೇಹಿತರು ತಿಳಿಸಿದ್ದಾರೆ.

ನ್ಯೂಯಾರ್ಕ್: ಕರ್ನಾಟಕ ಮೂಲದ 24 ವರ್ಷದ ವಿದ್ಯಾರ್ಥಿ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದಾರೆ. ಸಾಕೇತ್ ಶ್ರೀನಿವಾಸಯ್ಯ ಅಮೆರಿಕಾದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ನಾಪತ್ತೆಯಾಗಿದ್ದಾರೆ.
ಸಾಕೇತ್ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ MS ಓದುತ್ತಿದ್ದರು. ಕಳೆದ ಎರಡು ದಿನಗಳಿಂದ ಅವರಿಗೆ ಯಾರೊಂದಿಗೂ ಸಂಪರ್ಕ ಸಾಧ್ಯವಾಗಿಲ್ಲ ಎಂದು ಕುಟುಂಬಸ್ಥರು ಮತ್ತು ಸ್ನೇಹಿತರು ತಿಳಿಸಿದ್ದಾರೆ.
ಸಾಕೇತ್ ಕೊನೆಯ ಬಾರಿಗೆ ಫೆಬ್ರವರಿ 12ರಂದು ಕಾಣಿಸಿಕೊಂಡಿದ್ದರು ಎನ್ನಲಾಗಿದ್ದು, ಆ ದಿನ ಅವರು ಕ್ಯಾಲಿಫೋರ್ನಿಯಾದ ಟಿಲ್ಡೆನ್ ರೀಜನಲ್ ಪಾರ್ಕ್‌ನಲ್ಲಿರುವ ಕೆರೆಯ ಬಳಿ ಕಂಡುಬಂದಿದ್ದರು ಎಂದು ಮಾಹಿತಿ ಇದೆ. ಆ ನಂತರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
ತಾಯಿಗೆ ಸಾಕೇತ್ ಕಾಲ್ ಮಾಡಿದ್ದರು . ಆದರೆ ವಾಪಸ್ ಕರೆ ಮಾಡಿದಾಗ ಮಗ ಪಿಕ್ ಮಾಡಿಲ್ಲ ಎಂದು ಕುಟುಂಬದವರು ಹೇಳಿದ್ದಾರೆ. ಮಗ ಸಂಪರ್ಕಕ್ಕೆ ಸಿಗದಿರುವುದರಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.
ಪಾರ್ಕ್ ಹಿಲ್ಸ್ ನೆರೆಹೊರೆಯ ಮನೆ ಬಾಗಿಲಿನಲ್ಲಿ ಪಾಸ್‌ಪೋರ್ಟ್ ಮತ್ತು ಲ್ಯಾಪ್‌ಟಾಪ್‌ನೊಂದಿಗೆ ಅವರ ಅವರ ಬ್ಯಾಗ್ ಪತ್ತೆಯಾಗಿದೆ ಎಂದು ದಿ ಬರ್ಕ್ಲಿ ಸ್ಕ್ಯಾನರ್ ಸುದ್ದಿ ಪೋರ್ಟಲ್ ವರದಿ ಮಾಡಿದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್ ಅವರ ಕಣ್ಮರೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



