ಎಚ್ಚರ ಗ್ರಾಹಕರೇ: ಗ್ರಾಹಕರ 3.5 ಕೋಟಿ ರೂ ಮೌಲ್ಯದ ಚಿನ್ನವನ್ನು ಅಡಮಾನ ಇಟ್ಟಿದ್ದ ಬ್ಯಾಂಕ್ ಉದ್ಯೋಗಿ ಬಂಧನ!
ಗ್ರಾಹಕರಿಗೆ ಸೇರಿದ 2,780 ಗ್ರಾಂ ಚಿನ್ನಾಭರಣಗಳನ್ನು ದುರುಪಯೋಗಪಡಿಸಿಕೊಂಡ ಮತ್ತು ಅನಧಿಕೃತವಾಗಿ ಅಡಮಾನ ಇಟ್ಟಿದ್ದ ಬ್ಯಾಂಕಿನ ಉಪ ವ್ಯವಸ್ಥಾಪಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಗ್ರಾಹಕರಿಗೆ ಸೇರಿದ 2,780 ಗ್ರಾಂ ಚಿನ್ನಾಭರಣಗಳನ್ನು ದುರುಪಯೋಗಪಡಿಸಿಕೊಂಡ ಮತ್ತು ಅನಧಿಕೃತವಾಗಿ ಅಡಮಾನ ಇಟ್ಟಿದ್ದ ಬ್ಯಾಂಕಿನ ಉಪ ವ್ಯವಸ್ಥಾಪಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರು ಫೆಬ್ರವರಿ 5ರಂದು ಗಿರಿನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದೂರು ದಾಖಲಿಸಿದ ನಂತರ ವಂಚನೆ ಬೆಳಕಿಗೆ ಬಂದಿದೆ.
ಉನ್ನತ ಅಧಿಕಾರಿಗಳಿಗೆ ತಿಳಿಸದೆ ಬ್ಯಾಂಕ್ ಲಾಕರ್‌ಗಳಿಂದ 2,780 ಗ್ರಾಂ ಗ್ರಾಹಕರ ಚಿನ್ನಾಭರಣಗಳನ್ನು ತೆಗೆದು ಆರೋಪಿಗಳು ಹಣಕಾಸು ಕಂಪನಿಯಲ್ಲಿ ಅಡಮಾನ ಇಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ಸಮಯದಲ್ಲಿ ಆರೋಪಿಗಳು ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಹಣವನ್ನು ಖರ್ಚು ಮಾಡಿದ್ದಾರೆ ಎಂಬುದು ಪತ್ತೆಯಾಗಿದೆ. ಪ್ರಕರಣ ಸಂಬಂಧ ಆರೋಪಿ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಅನ್ನು ಬಂಧಿಸಲಾಗಿದೆ.
ನಾವು ಚಿನ್ನವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಇಲ್ಲಿಯವರೆಗೆ ಸುಮಾರು 700 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಲೋಕೇಶ್ ಬಿ ಜಗಲಾಸರ್ ಹೇಳಿದರು. ಇದೇ ವೇಳೆ, ಗ್ರಾಹಕರಿಗೆ ಬ್ಯಾಂಕ್ ಲಾಕರ್‌ಗಳಲ್ಲಿ ಇರಿಸಲಾಗಿರುವ ತಮ್ಮ ಆಭರಣಗಳ ಸುರಕ್ಷತೆ ಮತ್ತು ಸ್ಥಿತಿಯನ್ನು ಪರಿಶೀಲಿಸುವಂತೆ ಪೊಲೀಸರು ಸಲಹೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



