ತಾಯಿ ಫೋಟೋಶೂಟ್ ಮಾಡಿಸುವಾಗ ಅವಘಡ: 3 ವರ್ಷದ ಮಗು ನೀರಿನ ತೊಟ್ಟಿಗೆ ಬಿದ್ದು ಸಾವು
ಲಕ್ಷ್ಮೀರ್ (3ವ) ಮೃತ ಮಗುವಾಗಿದ್ದು, ಗರ್ಭಿಣಿ ತಾಯಿ ಫೋಟೊ ಶೂಟ್ ಮಾಡಿಸುತ್ತಿದ್ದ ವೇಳೆ, ಆಟವಾಡಿಕೊಂಡಿದ್ದ ಮಗು ಸ್ಥಳದಲ್ಲಿದ್ದ ಸಣ್ಣ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ.

ನೆಲಮಂಗಲ: ಎರಡನೇ ಮಗುವಿನ ಖುಷಿಯಲ್ಲಿದ್ದ ದಂಪತಿಯ ಮೊದಲನೇ ಮಗು ನೀರಿಗೆ ಬಿದ್ದು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ನಡೆದಿದೆ.
ಲಕ್ಷ್ಮೀರ್ (3ವ) ಮೃತ ಮಗುವಾಗಿದ್ದು, ಗರ್ಭಿಣಿ ತಾಯಿ ಫೋಟೊ ಶೂಟ್ ಮಾಡಿಸುತ್ತಿದ್ದ ವೇಳೆ, ಆಟವಾಡಿಕೊಂಡಿದ್ದ ಮಗು ಸ್ಥಳದಲ್ಲಿದ್ದ ಸಣ್ಣ ನೀರಿನ ಪೂಲ್ಗೆ ಬಿದ್ದು ಮೃತಪಟ್ಟಿದೆ. ಮಗುವಿನ ವಿಚಾರದಲ್ಲಿನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಮಗುವಿನ ದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸರ್ಕಾರಿ ಆಸ್ಪತ್ರಗೆ ರವಾನೆ ಮಾಡಲಾಗಿದೆ.
ಲಕ್ಷ್ಮೀರ್, ಬೆಂಗಳೂರಿನ ಜೆ.ಪಿ. ನಗರ ನಿವಾಸಿಯಾಗಿರುವ ಸ್ವಾತಿ ಹಾಗೂ ಚರಣ್ ರಾಜ್ ದಂಪತಿಯ ಮಗುವಾಗಿದ್ದು, ಒಂದು ವಾರದ ಹಿಂದೆ ಕೆಲಸದ ನಿಮಿತ್ತ ಚರಣ್ ರಾಜ್ ವಿದೇಶಕ್ಕೆ ತೆರಳಿದ್ದರು. ಪೋಟೋ ಶೂಟ್ ಮಾಡಿಸುವುದಾಗಿ ಗಂಡನ ಬಳಿ ಹೇಳಿ ಸ್ವಾತಿ ಸ್ನೇಹಿತೆಯೊಂದಿಗೆ ಬಂದಿದ್ದರು.
ಈ ವೇಳೆ ಅವಘಡ ನಡೆದಿದೆ. ಇನ್ನು ವಿದೇಶದಲ್ಲಿರುವ ಚರಣ್ ರಾಜ್ ನಾಳೆ ಬೆಂಗಳೂರಿಗೆ ಬರಲಿದ್ದು, ಈ ಹಿನ್ನೆಲೆ ಮಗುವಿನ ಮರಣೋತ್ತರ ಪರೀಕ್ಷೆ ನಾಳೆ ನಡೆಸಲಿದೆ ಎಂಬ ಮಾಹಿತಿ ಸಿಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



