ಶಿವಮೊಗ್ಗ: 40 ಸಾವಿರ ಲಂಚಕ್ಕೆ ಕೈಯೊಡುತ್ತಿದ್ದ KAS ಅಧಿಕಾರಿ ಸೇರಿ ಇಬ್ಬರು Lokayukta ಬಲೆಗೆ!
40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಶಿವಮೊಗ್ಗ ವಿಶೇಷ ಭೂ ಸ್ವಾಧೀನಾಧಿಕಾರಿ ಕಛೇರಿಗೆ ಓತಿಘಟ್ಟ ಗ್ರಾಮದ ಕೇಶವಮೂರ್ತಿ ಎಂಬುವವರು ತಮ್ಮ ಎರಿಟಿಗಾ ಕಾರನ್ನು ಕಳೆದ ಎರಡು ವರ್ಷಗಳಿಂದ ಬಾಡಿಗೆಗೆ ನೀಡಿದ್ದರು. 2025ರ ನವೆಂಬರ್ ತಿಂಗಳ ಬಾಡಿಗೆ ಹಣದ ಚೆಕ್ ನೀಡಲು ಸಿದ್ದಲಿಂಗ ರೆಡ್ಡಿ ಅವರು ಕೇಶವಮೂರ್ತಿಗೆ 40,000 ರೂ. ಲಂಚ ನೀಡುವಂತೆ ಸೂಚಿಸಿದ್ದರು. ಈ ಬಗ್ಗೆ ಕೇಶವಮೂರ್ತಿ ಲೋಕಾಯುಕ್ತರಿಗೆ ದೂರು ನೀಡಿದ್ದರು.
ಸಿದ್ದಲಿಂಗ ರೆಡ್ಡಿ ಸೂಚನೆಯಂತೆ ಫೆ.14ರ ಸಂಜೆ ಹೊಳಲೂರು ನಾಡಕಛೇರಿಯ ಗ್ರಾಮ ಸಹಾಯಕ ರಾಜೇಶ್, ಶಿವಮೊಗ್ಗದ ನೆಹರೂ ಸ್ಟೇಡಿಯಂ ಬಳಿ ಕೇಶವಮೂರ್ತಿ ಅವರಿಂದ 40,000 ರೂ. ಹಣ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



