ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ಪ್ರಕರಣದ ಸ್ವರೂಪ ಮತ್ತು ದಾಖಲೆಗಳನ್ನು ಪರಿಗಣಿಸಿ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಮುಖ ದಿನಪತ್ರಿಕೆಗಳಲ್ಲಿ "ಭ್ರಷ್ಟಾಚಾರ ರೇಟ್ ಕಾರ್ಡ್" ಜಾಹೀರಾತು ಪ್ರಕಟಿಸಿದ್ದಕ್ಕಾಗಿ ರಾಜ್ಯ ಬಿಜೆಪಿ ಘಟಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.
ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬಿಡುಗಡೆ ಮಾಡಿದ್ದ ‘ಕರಪ್ಶನ್ ರೇಟ್ ಕಾರ್ಡ್’ ಜಾಹೀರಾತನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪರವಾಗಿ ಕೇಶವಪ್ರಸಾದ್ ಎಂಬುವವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ಪ್ರಕರಣದ ಸ್ವರೂಪ ಮತ್ತು ದಾಖಲೆಗಳನ್ನು ಪರಿಗಣಿಸಿ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮೇ 5, 2023 ರಂದು ಪತ್ರಿಕಾ ಜಾಹೀರಾತುಗಳ ಮೂಲಕ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಲಾಗಿತ್ತು. ಈ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ), ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದೂರು ದಾಖಲಿಸಿತ್ತು. ಗುತ್ತಿಗೆದಾರರಿಂದ ಬಿಜೆಪಿ 40 ಪರ್ಸೆಂಟ್ ಕಮಿಷನ್ ಬೇಡಿಕೆ ಇಟ್ಟಿದೆ ಎಂದು ಜಾಹೀರಾತುಗಳಲ್ಲಿ ಆರೋಪಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



