ಮೆಗಾ ರೈಲು ಕೋಚಿಂಗ್ ಟರ್ಮಿನಲ್ ಯೋಜನೆ ದೇವನಹಳ್ಳಿಯಿಂದ ಯಲಹಂಕಕ್ಕೆ ಶಿಫ್ಟ್
ನಾಯಂಡಹಳ್ಳಿ ನಿಲ್ದಾಣದಲ್ಲಿ ನಾಲ್ಕು ಎಕ್ಸ್‌ಪ್ರೆಸ್ ರೈಲುಗಳ ಹೆಚ್ಚುವರಿ ಪ್ರಾಯೋಗಿಕ ನಿಲುಗಡೆಗೆ ಹಸಿರು ನಿಶಾನೆ ತೋರಿಸಿದ ನಂತರ ಮಾತನಾಡಿದ ಸಚಿವರು, “ಟರ್ಮಿನಲ್‌ಗಾಗಿ ಅಂತಿಮ ಸ್ಥಳ ಸಮೀಕ್ಷೆಯನ್ನು ರೈಲ್ವೆ ಮಂಡಳಿಯು ಅನುಮೋದಿಸಿದೆ” ಎಂದು ತಿಳಿಸಿದರು.

ಬೆಂಗಳೂರು: ದೇವನಹಳ್ಳಿ ಬಳಿ ಸ್ಥಾಪಿಸಲಾಗುತ್ತಿದ್ದ ಪ್ರಸ್ತಾವಿತ ಮೆಗಾ ರೈಲು ಕೋಚಿಂಗ್ ಟರ್ಮಿನಲ್ ಅನ್ನು ಈಗ ಯಲಹಂಕದಲ್ಲಿ ನಿರ್ಮಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮಂಗಳವಾರ ಹೇಳಿದ್ದಾರೆ.
ನಾಯಂಡಹಳ್ಳಿ ನಿಲ್ದಾಣದಲ್ಲಿ ನಾಲ್ಕು ಎಕ್ಸ್‌ಪ್ರೆಸ್ ರೈಲುಗಳ ಹೆಚ್ಚುವರಿ ಪ್ರಾಯೋಗಿಕ ನಿಲುಗಡೆಗೆ ಹಸಿರು ನಿಶಾನೆ ತೋರಿಸಿದ ನಂತರ ಮಾತನಾಡಿದ ಸಚಿವರು, “ಟರ್ಮಿನಲ್‌ಗಾಗಿ ಅಂತಿಮ ಸ್ಥಳ ಸಮೀಕ್ಷೆಯನ್ನು ರೈಲ್ವೆ ಮಂಡಳಿಯು ಅನುಮೋದಿಸಿದೆ” ಎಂದು ತಿಳಿಸಿದರು.
ಮೈಸೂರು–ಕೆಎಸ್‌ಆರ್ ಬೆಂಗಳೂರು ಚಾಮುಂಡಿ ಎಕ್ಸ್‌ಪ್ರೆಸ್(16215/16216), ಮೈಸೂರು–ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್(17307/17308), ಟುಟಿಕೋರಿನ್–ಮೈಸೂರು ಎಕ್ಸ್‌ಪ್ರೆಸ್ (16235/16236) ಮತ್ತು ಮೈಸೂರು–ಪಂಢರಪುರ ಗೋಲ್ ಗುಂಬಜ್ ಎಕ್ಸ್‌ಪ್ರೆಸ್(16535/16536) ರೈಲುಗಳು ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆ ಮಾಡಲಿವೆ.
ದೀರ್ಘಕಾಲದಿಂದ ಬಾಕಿ ಉಳಿದಿದ್ದ ಈ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಹೇಳಿದ ಸೋಮಣ್ಣ, ನಾಯಂಡಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ವಿದ್ಯಾರ್ಥಿಗಳು, ಕಾರ್ಮಿಕರು ಮತ್ತು ಕಚೇರಿ ಕೆಲಸಗಾರರಿಗೆ ಈ ನಿಲುಗಡೆಯಿಂದ ಪ್ರಯೋಜನವಾಗಲಿದೆ ಎಂದು ಹೇಳಿದರು.
ಈ ಬಜೆಟ್‌ನಲ್ಲಿ ರಾಜ್ಯದ ರೈಲ್ವೆ ಯೋಜನೆಗಳಿಗೆ 7,748 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ರಾಜ್ಯಾದ್ಯಂತ 52,950 ಕೋಟಿ ರೂ.ಗಳ ಯೋಜನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಬೆಂಗಳೂರು ಕಂಟೋನ್ಮೆಂಟ್ ಮತ್ತು ವೈಟ್‌ಫೀಲ್ಡ್ ನಡುವಿನ ಚತುಷ್ಪಥ ಯೋಜನೆ ವೇಗವಾಗಿ ನಡೆಯುತ್ತಿದೆ ಎಂದು ಅವರು ಹೇಳಿದರು.
ನಂತರ ವಿಜಯನಗರ ಮತ್ತು ಪಾದರಾಯನಪುರ ನಡುವಿನ ಪುನರ್ನಿರ್ಮಾಣಗೊಂಡ ರಸ್ತೆ ಓವರ್ ಬ್ರಿಡ್ಜ್(ಆರ್‌ಒಬಿ) ಸಂಖ್ಯೆ 431 ಅನ್ನು ಸಚಿವರು ಉದ್ಘಾಟಿಸಿದರು.
14.10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಹೊಸ ಓವರ್ ಬ್ರಿಡ್ಜ್ ಜನನಿಬಿಡ ಮೈಸೂರು-ಬೆಂಗಳೂರು ರೈಲು ಮಾರ್ಗದಲ್ಲಿ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಸುರಕ್ಷತೆಯನ್ನು ಸುಧಾರಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



