ಬೆಂಗಳೂರು: ಕತ್ತು ಹಿಸುಕಿ ಪತ್ನಿ ಕೊಲೆ ಮಾಡಿದ ಇಸ್ರೋ ನಿವೃತ್ತ ಉದ್ಯೋಗಿಯ ಬಂಧನ
ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು, ಆರೋಪಿ ನಾಗೇಶ್ವರ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ 65 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ಬುಧವಾರ ತಮ್ಮ ನಿವಾಸದಲ್ಲಿ ಟವಲ್‌ನಿಂದ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು, ಆರೋಪಿ ನಾಗೇಶ್ವರ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾವ್ ಖಿನ್ನತೆಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಪತ್ನಿಯನ್ನು ಕೊಂದ ನಂತರ ರಾವ್ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ನಿ ಸಂಧ್ಯಾ ಶ್ರೀ ಅವರನ್ನು ಕೊಲೆ ಮಾಡಿದ ನಡೆದ ನಂತರ, ರಾವ್ ಸ್ಥಳದಲ್ಲೇ ಇದ್ದರು. ನಂತರ ಅವರ ಪರಿಚಯಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸ್ ತಂಡ, ನಿವಾಸಕ್ಕೆ ತೆರಳಿ ರಾವ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
"ಆರೋಪಿ ರಾವ್ ಖಿನ್ನತೆಗೆ ಖಿನ್ನತೆಗೆ ಒಳಗಾಗಿದ್ದರು ಮತ್ತು ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಘಟನೆಯ ನಂತರ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದರು ಎಂದು ಹೇಳಲಾಗಿದೆ. ಅಮೆರಿಕದಲ್ಲಿರುವ ದಂಪತಿಯ ಮಗಳಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ" ಎಂದು ಉಪ ಪೊಲೀಸ್ ಆಯುಕ್ತ(ವೈಟ್‌ಫೀಲ್ಡ್) ಸೈದುಲು ಅಡವತ್ ಅವರು ತಿಳಿಸಿದ್ದಾರೆ.
ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



