ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲು ತೂರಾಟ; ತಪ್ಪಿದ ಕೋಮು ಸಂಘರ್ಷ, FIR ದಾಖಲು
ಶಾಂತಿ ಕದಡುವ ಮತ್ತು ಮಾರಕ ಆಯುಧಗಳಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ನಾಯಕ ಸಂತೋಷ್ ಕೋಟ್ಯಾನ್ ಮತ್ತು ಬಜರಂಗದಳ ನಾಯಕ ಶ್ಯಾಮ್ ವಿ ಗೌಡ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರಿನ ವಿಜಯಪುರ ಎಕ್ಸ್ಟೆನ್ಷನ್‌ನಲ್ಲಿ ಸೋಮವಾರ ರಾತ್ರಿ ಮುಸ್ಲಿಂ ಸಮುದಾಯದ ಯುವಕರು, ಹಿಂದೂ ವ್ಯಕ್ತಿಯೊಬ್ಬರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ ನಂತರ ಘಟನೆ ಕೋಮು ಘರ್ಷಣೆಗೆ ತಿರುಗುವ ಸಾಧ್ಯತೆ ಇತ್ತು. ಆದರೆ ಎರಡೂ ಸಮುದಾಯದವರ ವಿರುದ್ಧ ಕೇಸ್ ದಾಖಲಿಸಿರುವುದರಿಂದ ಪರಿಸ್ಥಿತಿ ತಿಳಿಯಾಗಿದೆ.
ಸಮುದಾಯಗಳ ನಡುವೆ ಪರಸ್ಪರ ಅನುಮಾನವಿದ್ದು, ಎರಡೂ ಸಮುದಾಯಗಳ ನೂರಾರು ಯುವಕರು ಬಸವನಹಳ್ಳಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ, ಆಕ್ರೋಶ ವ್ಯಕ್ತಪಡಿಸಿದ್ದರು.
ಸುಧಾ ಎಂಬುವವರ ಮನೆಯ ಮೇಲೆ ಕಲ್ಲು ಎಸೆದ ಆರೋಪದ ಮೇಲೆ ಹುಸೇನ್ ಮತ್ತು ಹಫ್ಸಾದ್ ಎಂದು ಗುರುತಿಸಲಾದ ಅಪ್ರಾಪ್ತರ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಶಾಂತಿ ಕದಡುವ ಮತ್ತು ಮಾರಕ ಆಯುಧಗಳಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ನಾಯಕ ಸಂತೋಷ್ ಕೋಟ್ಯಾನ್ ಮತ್ತು ಬಜರಂಗದಳ ನಾಯಕ ಶ್ಯಾಮ್ ವಿ ಗೌಡ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಇನ್ನು ಹಫ್ಸಾದ್ ಹಾಗೂ ಹುಸೇನ್ ಮೇಲೆ BNS ಕಾಯ್ದೆಯ ವಿವಿಧ ಕಲಂಗಳ ಅಡಿ ಹಾಗೂ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದೆಡೆ ಶಾಮ್ ಮತ್ತು ಸಂತೋಷ್ ವಿರುದ್ಧವೂ BNS ವಿವಿಧ ಕಲಂಗಳಡಿ ಕೇಸ್ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



