ಆನ್ ಲೈನ್ ಗೇಮಿಂಗ್ ನಲ್ಲಿ ಹಣ ಕಳೆದುಕೊಂಡ ಆರೋಪಿಗಳು: ಸ್ಪಾ ಮ್ಯಾನೇಜರ್ ಅಪಹರಣ ಮಾಡಿದ್ದ ಮೂವರು ಅಂದರ್!
ಫೆಬ್ರವರಿ 15 ರಂದು, ಆಶಿತ್ ಝಾ ರಾತ್ರಿ 9 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಮಲ್ಲುಕುಮಾರ್ ಎಂಬ ಮತ್ತೊಬ್ಬ ಸಿಬ್ಬಂದಿಯೊಂದಿಗೆ ಮನೆಗೆ ಹೋಗುತ್ತಿದ್ದ. ಬೆಟ್ಟದಾಸನಪುರ ಬಳಿ, ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಹಿಂದಿನಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸ್ಪಾ ಸೀನಿಯರ್ ಮ್ಯಾನೇಜರ್‌ನನ್ನು ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡಿದ್ದ ಆರೋಪಿಗಳು ಹಣಕ್ಕಾಗಿ ಈ ಕೃತ್ಯ ಎಸಗಿದ್ದರು.
ಆರೋಪಿಗಳನ್ನು ಗೊಟ್ಟಿಗೆರೆಯ ಅಪಾರ್ಟ್‌ಮೆಂಟ್‌ನಲ್ಲಿ ವ್ಯವಸ್ಥಾಪಕ ಮಂಜುನಾಥ್ (25), ಪ್ರಜ್ವಲ್ (25), ಕಾರು ಚಾಲಕ ಮತ್ತು ಜಿಗಣಿ ನಿವಾಸಿ ಅಕ್ಷಯ್ (28) ಎಂದು ಗುರುತಿಸಲಾಗಿದೆ. ಅಕ್ಷಯ್ ಕೂಡ ಮತ್ತೊಂದು ಪ್ರಕರಣದಲ್ಲಿ ಕೊಲೆ ಆರೋಪಿಯಾಗಿದ್ದಾನೆ.
ಬನ್ನೇರುಘಟ್ಟ ನಿವಾಸಿಯಾದ ಮಂಜುನಾಥ್ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಅಪಾರ್ಟ್‌ಮೆಂಟ್ ಗೆ ಸೇರಿದ್ದ ಹಣವನ್ನು ಕಳೆದುಕೊಂಡಿದ್ದ, ಆ ಹಣವನ್ನು ಮರಳಿ ಪಡೆಯಲು ಬಯಸಿದ್ದ. ಸಂತ್ರಸ್ತ ಬಿಹಾರದ ಆಶಿತ್ ಝಾ (28), ಅಕ್ಷಯನಗರದ ಥಾಯ್ ಸ್ಪಾದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು.
ಫೆಬ್ರವರಿ 15 ರಂದು, ಆಶಿತ್ ಝಾ ರಾತ್ರಿ 9 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಮಲ್ಲುಕುಮಾರ್ ಎಂಬ ಮತ್ತೊಬ್ಬ ಸಿಬ್ಬಂದಿಯೊಂದಿಗೆ ಮನೆಗೆ ಹೋಗುತ್ತಿದ್ದ. ಬೆಟ್ಟದಾಸನಪುರ ಬಳಿ, ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಹಿಂದಿನಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ, ಮೂವರು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಚ್ಚು ಮತ್ತು ಇತರ ಆಯುಧಗಳಿಂದ ಹಲ್ಲೆ ಮಾಡಿದ್ದಾರೆ, ನಂತರ ಆಶಿತ್ ಝಾ ಕಣ್ಣಿಗೆ ಬಟ್ಟೆ ಕಟ್ಟಿ ಕಾರಿನಲ್ಲಿ ಕೂರಿಸಿಕೊಂಡು ಪರಾರಿಯಾಗಿದ್ದರು.
ನಂತರ ಆರೋಪಿ ಮಲ್ಲೂಕುಮಾರ್‌ಗೆ ಕರೆ ಮಾಡಿ 2 ಲಕ್ಷ ರೂ. ಹಣ ನೀಡುವಂತೆ ಒತ್ತಾಯಿಸಿ, ಹಣ ನೀಡದಿದ್ದರೆ ಝಾನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಪೊಲೀಸರಿಗೆ ಆರಂಭದಲ್ಲಿ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಹಲವು ಕೋನಗಳಲ್ಲಿ ತನಿಖೆ ನಡೆಸಿದ ಪೊಲೀಸರು ಕಿಡ್ನಾಪ್ ಮಾಡಿದ್ದ ವಾಹನವನ್ನು ಜಿಗಣಿಯಲ್ಲಿ ಪತ್ತೆಹಚ್ಚಿದರು. ಈ ವೇಳೆ ಹಣ ಪಡೆಯಲು ಬಂದ ಆರೋಪಿ ಅಕ್ಷಯ್‌ನನ್ನು ಮೊದಲು ಬಂಧಿಸಿದ್ದರು. ಬಳಿಕ ಈತನ ನೀಡಿದ ಮಾಹಿತಿ ಆಧರಿಸಿ ಮಂಜುನಾಥ ಮತ್ತು ಪ್ರಜ್ವಲ್‌ನನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಆನೇಕಲ್‌ನಲ್ಲಿ ಅಡಗಿಕೊಂಡಿದ್ದ. ಮಂಗಳವಾರ ಸಂಜೆ, ಪೊಲೀಸರು ಝಾ ಅವರೊಂದಿಗೆ ಮೂವರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದರು.
ವಿಚಾರಣೆಯ ಸಮಯದಲ್ಲಿ, ಗೊಟ್ಟಿಗೆರೆಯ ಅಪಾರ್ಟ್‌ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರಜ್ವಲ್, ಅಪಾರ್ಟ್‌ಮೆಂಟ್ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಮತ್ತು ನಂತರ ಆನ್‌ಲೈನ್ ಗೇಮಿಂಗ್‌ನಲ್ಲಿ ಹಣವನ್ನು ಕಳೆದುಕೊಂಡಿದ್ದಾನೆ ಎಂದು ಆರೋಪಿ ಬಹಿರಂಗಪಡಿಸಿದ್ದಾನೆ.
ಹಣವನ್ನು ಮರುಪಡೆಯಲು, ಅವನು ತನ್ನ ಸ್ನೇಹಿತರೊಂದಿಗೆ ಅಪಹರಣ ಸಂಚು ರೂಪಿಸಿದ್ದ. ಅವರು ತಮ್ಮ ಯೋಜನೆಯನ್ನು ಕಾರ್ಯಗತಗೊಳಿಸುವ ಮೊದಲು ಒಂದು ತಿಂಗಳಿಗೂ ಹೆಚ್ಚು ಕಾಲ ಆಶಿತ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



