ರಾಜ್ಯ

'ತಂಗಿಗೆ ಕೇಳಿದ್ದೆಲ್ಲಾ ಕೊಡಿಸ್ತೀರಾ': ತಾಯಿ ಜೊತೆ ಜಗಳ ಮಾಡಿ, ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಪುತ್ರ ಆತ್ಮಹತ್ಯೆ!

ಹೇಮಂತ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಪಿಎಸ್ ಆಗಿದ್ದ ಚಂದ್ರು ಬೆಂಗಳೂರಿನ ಸಂಜಯನಗರ ನಿವಾಸದಲ್ಲಿ ವಾಸಿಸುತ್ತಿದ್ದರು.

'ತಂಗಿಗೆ ಕೇಳಿದ್ದೆಲ್ಲಾ ಕೊಡಿಸ್ತೀರಾ': ತಾಯಿ ಜೊತೆ ಜಗಳ ಮಾಡಿ, ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಪುತ್ರ ಆತ್ಮಹತ್ಯೆ!
ಹೇಮಂತ್
Published On :

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಚಂದ್ರು ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹೇಮಂತ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಪಿಎಸ್ ಆಗಿದ್ದ ಚಂದ್ರು ಬೆಂಗಳೂರಿನ ಸಂಜಯನಗರ ನಿವಾಸದಲ್ಲಿ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಕೋಣೆಯ ಬಾಗಿಲು ತೆಗೆದಾಗ ಹೇಮಂತ್ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಕುಟುಂಬಸ್ಥರೆಲ್ಲರೂ ತಿರುಪತಿಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದರು.

ಶುಕ್ರವಾರ ಹೇಮಂತ್‌ನ ತಂಗಿಗೆ ಆಭರಣ ಕೊಡಿಸಲಾಗಿತ್ತು. ಈ ಸಂಬಂಧ ತಾಯಿ ಜೊತೆ ಹೇಮಂತ್ ಜಗಳ ಮಾಡಿಕೊಂಡಿದ್ದನು. ತಂಗಿಗೆ ಕೇಳಿದ್ದೆಲ್ಲಾ ಕೊಡಿಸ್ತೀರಾ, ನನಗೇನೂ ಕೊಡಿಸಲ್ಲ ಎಂದು ಕೋಪದಲ್ಲಿ ಕೋಣೆಗೆ ಹೋಗಿದ್ದ ಹೇಮಂತ್ ಬಾಗಿಲು ಹಾಕಿಕೊಂಡಿದ್ದನು. ರಾತ್ರಿ ಊಟಕ್ಕೂ ಕರೆದ್ರೂ ಹೇಮಂತ್ ಕೋಣೆಯಿಂದ ಹೊರಗೆ ಬಂದಿರಲಿಲ್ಲ.

ರಾತ್ರಿ ಸುಮಾರು 8 ಗಂಟೆವರೆಗೂ ಸ್ನೇಹಿತರೊಂದಿಗೆ ಮೊಬೈಲ್‌ನಲ್ಲಿ ಮಾತನಾಡಿದ್ದಾನೆ. ನಂತರ ಮೊಬೈಲ್ ಸ್ವಿಚ್ಛ್ ಆಫ್ ಮಾಡಿಕೊಂಡಿದ್ದಾನೆ. ರಾತ್ರಿ ಸುಮಾರು 12 ಗಂಟೆಗೆ ಹೇಮಂತ್ ನೇಣುಬಿಗಿದುಕೊಂಡಿರುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.