ಲಂಚ ಆರೋಪ: ಶಾಲಿನಿ ರಜನೀಶ್ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ; ವಿಚಾರಣೆ ಬಳಿಕ ಉಲ್ಟಾ ಹೊಡೆದ ಸಾಮಾಜಿಕ ಕಾರ್ಯಕರ್ತ!
ಸುಮಾರು 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈಗ ಉಲ್ಟಾ ಹೊಡೆದಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಲಂಚ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ಇದೀಗ ಸಿಸಿಬಿ(CCB) ಪೊಲೀಸರ ವಿಚಾರಣೆ ಬಳಿಕ ಉಲ್ಟಾ ಹೊಡೆದಿದ್ದಾರೆ.
ಸಿಸಿಬಿ ವಿಚಾರಣೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಸ್ನೇಹಮಯಿ ಕೃಷ್ಣ ಅವರು, ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಅವರು ಶಾಲಿನಿ ರಜನೀಶ್ ಅವರಿಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು.
ಈ ಸಂಬಂಧ ಸಿಸಿಬಿ ಪೊಲೀಸರು ನಿನ್ನೆ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಮಾಡಿತ್ತು. ಅಲ್ಲದೆ ಮೈಸೂರಿನ ಅವರ ಎರಡು ಮನೆ, ಒಂದು ಕಚೇರಿ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಕೆಲವು ಪ್ರಮುಖ ದಾಖಲೆಗಳನ್ನ ಸೀಜ್ ಮಾಡಿದ್ದರು.
ಸುಮಾರು 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈಗ ಉಲ್ಟಾ ಹೊಡೆದಿದ್ದಾರೆ.
ವಿಚಾರಣೆ ಬಳಿಕ ತಪ್ಪೊಪ್ಪಿಕೊಂಡಿರೋ ಸ್ನೇಹಮಯಿ ಕೃಷ್ಣ, ಆಡಿಯೋ ನಿಜ, ಆದರೆ ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು ಅಂದಿದ್ದಾರೆ. ಮುಡಾ ಪ್ರಕರಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಂಧಿಸಿಲ್ಲ, ವಿಚಾರಣೆ ಮಾತ್ರ
ತಮ್ಮ ಬಂಧನದ ಕುರಿತಾದ ವದಂತಿಗಳಿಗೆ ತೆರೆ ಎಳೆದ ಸ್ನೇಹಮಯಿ ಕೃಷ್ಣ, 'ಪೊಲೀಸರು ನನ್ನನ್ನು ಬಂಧಿಸಿಲ್ಲ, ಕೇವಲ ನೋಟಿಸ್ ನೀಡಿ ವಿಚಾರಣೆಗೆ ಕರೆದಿದ್ದರು. ನಿನ್ನೆಯಿಂದಲೂ ಪೊಲೀಸರು ನನ್ನನ್ನು ಚೆನ್ನಾಗಿ ನಡೆಸಿಕೊಂಡಿದ್ದಾರೆ. ತನಿಖೆಗೆ ನಾನು ಸಂಪೂರ್ಣ ಸಹಕಾರ ನೀಡಿದ್ದೇನೆ. ಯಾವುದೇ ನಕಲಿ ದಾಖಲೆಗಳನ್ನು ನಾನು ಸೃಷ್ಟಿಸಿಲ್ಲ' ಎಂದು ಹೇಳಿದ್ದಾರೆ.
ಶಾಲಿನಿ ರಜನೀಶ್ಗೆ ಕ್ಷಮೆ ಕೇಳಿದ ಸ್ನೇಹಮಯಿ
ಸ್ನೇಹಮಯಿ ಕೃಷ್ಣ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ವಿನೋದ್ ಮತ್ತು ನಟೇಶ್ ನಡುವಿನ ಹಣಕಾಸಿನ ವಿವಾದಕ್ಕೆ ಸಂಬಂಧಿಸಿದ ಆಡಿಯೋದಲ್ಲಿ, ಶಾಲಿನಿ ರಜನೀಶ್ ಅವರ ಬಗ್ಗೆ ನೀಡಲಾದ ಮಾಹಿತಿ ಸುಳ್ಳು. ಹೀಗಾಗಿ ನನ್ನ ತಪ್ಪಿಗಾಗಿ ನಾನು ಶಾಲಿನಿ ರಜನೀಶ್ ಅವರಗೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



