ರಾಜ್ಯ

AI Summit ಆಹ್ವಾನದಲ್ಲಿ ಕೇಂದ್ರ ಸರ್ಕಾರ ರಾಜಕೀಯ; ತಂತ್ರಜ್ಞಾನ ಮುನ್ನಡೆಸುವ ದಕ್ಷಿಣ ರಾಜ್ಯಗಳ ನಿರ್ಲಕ್ಷ್ಯ: ಪ್ರಿಯಾಂಕ್ ಖರ್ಗೆ

ದೇಶದ ಹಿತಾಸಕ್ತಿಗಾಗಿ ಪಕ್ಷ ರಾಜಕಾರಣ ಮೀರಿ ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳಿಗೆ ಕರ್ನಾಟಕ ಸಹಕಾರ ನೀಡಿದೆ. ಆದರೆ, ಎಐ ಶೃಂಗಸಭೆಗಳಂತಹ ರಾಷ್ಟ್ರೀಯ ವೇದಿಕೆಯಲ್ಲಿ ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳ ಐಟಿ ಸಚಿವರನ್ನು ಹೊರಗಿಡಲಾಗಿದೆ.

AI Summit ಆಹ್ವಾನದಲ್ಲಿ ಕೇಂದ್ರ ಸರ್ಕಾರ ರಾಜಕೀಯ; ತಂತ್ರಜ್ಞಾನ ಮುನ್ನಡೆಸುವ ದಕ್ಷಿಣ ರಾಜ್ಯಗಳ ನಿರ್ಲಕ್ಷ್ಯ: ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ
Published On :

ಬೆಂಗಳೂರು: ನವದೆಹಲಿಯಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡಿದ್ದು, ಭಾರತದ ತಂತ್ರಜ್ಞಾನ ಮತ್ತು ನವೋದ್ಯಮ ಕ್ಷೇತ್ರವನ್ನು ಮುನ್ನಡೆಸುತ್ತಿರುವ ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಿಗೆ ಆಹ್ವಾನ ನೀಡಿಲ್ಲ ಎಂದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದ ಹಿತಾಸಕ್ತಿಗಾಗಿ ಪಕ್ಷ ರಾಜಕಾರಣ ಮೀರಿ ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳಿಗೆ ಕರ್ನಾಟಕ ಸಹಕಾರ ನೀಡಿದೆ. ಆದರೆ, ಎಐ ಶೃಂಗಸಭೆಗಳಂತಹ ರಾಷ್ಟ್ರೀಯ ವೇದಿಕೆಯಲ್ಲಿ ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳ ಐಟಿ ಸಚಿವರನ್ನು ಹೊರಗಿಡಲಾಗಿದೆ ಎಂದು ಹೇಳಿದ್ದಾರೆ.

ಮಾಜಿ ಇನ್ಫೋಸಿಸ್ ಸಿಎಫ್‌ಒ ಮೋಹನ್‌ದಾಸ್ ಪೈ ಅವರ ಟೀಕೆಗೆ ಪ್ರತಿಕ್ರಿಯಿಸಿ, “ಕರ್ನಾಟಕದ ಅನೇಕ ಎಐ ಉದ್ಯಮಿಗಳು ಶೃಂಗಸಭೆಯವ್ವಿ ಭಾಗವಹಿಸಿದ್ದರೂ ರಾಜ್ಯ ಸರ್ಕಾರವನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿದೆ. ಇದು ರಾಜಕೀಯ ಪ್ರೇರಿತ ನಿರ್ಲಕ್ಷ್ಯ ಎಂದು ಆರೋಪಿಸಿದರು.

ಇದೇ ವೇಳೆ ಕಳೆದ ಕೆಲವು ತಿಂಗಳಲ್ಲಿ ಮಿಸ್ಟ್ರಲ್ ಎಐ, ಗೂಗಲ್, ಹಾರ್ವಿ, ಎಲೆವನ್‌ಲ್ಯಾಬ್ಸ್, ಡಿಸ್ನಿ, ಆಂಥ್ರೋಪಿಕ್ ಸೇರಿದಂತೆ ಜಾಗತಿಕ ಕಂಪನಿಗಳು ಕರ್ನಾಟಕದಲ್ಲಿ ಹೂಡಿಕೆ ಮಾಡಿರುವುದನ್ನು ಉಲ್ಲೇಖಿಸಿದ ಅವರು, “ಇವು ನೈಜ ಹೂಡಿಕೆಗಳು. ಆದರೆ, ಸಾಧನೆಗಳನ್ನು ಮೌನಗೊಳಿಸಿ ನಷ್ಟಗಳನ್ನು ಮಾತ್ರ ಹೈಲೈಟ್ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಹೂಡಿಕೆ ಆಕರ್ಷಿಸುತ್ತಿದೆ, ವಿಸ್ತಾರಗೊಳ್ಳುತ್ತಿದೆ ಮತ್ತು ದೇಶದ ಬೆಳವಣಿಗೆ ದೃಷ್ಟಿಕೋನಕ್ಕೆ ಹೊಂದಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರು ಮತ್ತು ಪೈ ಅವರು ರಾಜ್ಯದ ಪರ ನಿಲ್ಲಬೇಕಿದೆ. ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ರಾಜ್ಯಗಳ ಕೊಡುಗೆಗಳನ್ನು ಕೇಂದ್ರ ಸರ್ಕಾರ ಗುರುತಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.