ಲಂಚ ಪ್ರಕರಣ: BJP ಶಾಸಕ ಡಾ. ಚಂದ್ರು ಲಮಾಣಿ, ಇಬ್ಬರು ಆಪ್ತರಿಗೆ ನ್ಯಾಯಾಂಗ ಬಂಧನ!
ಭಾನುವಾರ ಅವರನ್ನು ಬೆಂಗಳೂರಿಗೆ ಕರೆತಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದರು.

ಬೆಂಗಳೂರು: ಗುತ್ತಿಗೆದಾರನಿಂದ 5 ಲಕ್ಷ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಶನಿವಾರ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಮತ್ತು ಅವರ ಇಬ್ಬರು ಆಪ್ತ ಸಹಾಯಕರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾರ್ಚ್ 3ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಭಾನುವಾರ ಅವರನ್ನು ಬೆಂಗಳೂರಿಗೆ ಕರೆತಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದರು.
ಬೆಂಗಳೂರಿನ ನ್ಯಾಯಾಂಗ ಬಡಾವಣೆಯಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ಚಂದ್ರು ಲಮಾಣಿ ಹಾಗೂ ಅವರ ಇಬ್ಬರ ಆಪ್ತರನ್ನು ಹಾಜರುಪಡಿಸಲಾಯಿತು.
ನ್ಯಾಯಾಧೀಶರ ಆದೇಶದಂತೆ ಮೂವರನ್ನು ಪೊಲೀಸರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



