ರಾಜ್ಯ

Ludo ಕಾಯಿನ್ ನುಂಗಿ 8 ವರ್ಷದ ಬಾಲಕಿ ಉಸಿರುಗಟ್ಟಿ ಸಾವು..!

ಶನಿವಾರ ಮಧ್ಯಾಹ್ನ ತಮ್ಮ ಸಹೋದರ ಮತ್ತು ಸಹೋದರಿಯೊಂದಿಗೆ ಲೂಡೋ ಆಟ ಆಡುತ್ತಿದ್ದ ಸಂದರ್ಭದಲ್ಲಿ, ತನುಷ್ಕಾ ಆಟದ ಕಾಯಿನ್'ನ್ನು ಆಕಸ್ಮಿಕವಾಗಿ ನುಂಗಿದ್ದಾಳೆ.

Ludo ಕಾಯಿನ್ ನುಂಗಿ 8 ವರ್ಷದ ಬಾಲಕಿ ಉಸಿರುಗಟ್ಟಿ ಸಾವು..!
ಸಂಗ್ರಹ ಚಿತ್ರ
Published On :

ಮಂಗಳೂರು: ಆಟದ ವೇಳೆ ಲೂಡೋ ಆಟದ ನಾಣ್ಯವನ್ನು ನುಂಗಿದ ಪರಿಣಾಮ 8 ವರ್ಷದ ಬಾಲಕಿಯೊಬ್ಬಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮಂಗಳೂರು ಸಮೀಪದ ಉಳ್ಳಾಲದ ಕೊಲ್ಯ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ತನುಷ್ಕಾ ಎಂದು ಗುರುತಿಸಲಾಗಿದೆ. ಈಕೆ ಕೇರಳದ ಕಾಸರಗೋಡು ಜಿಲ್ಲೆಯ ಮಧೂರಿನ ರಾಜೇಶ್ ಗಟ್ಟಿ ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ. ತನುಷ್ಕಾ ತೊಕ್ಕೊಟ್ಟಿನ ಸೆಂಟ್ ಸೆಬಾಸ್ಟಿಯನ್ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು.

ಶನಿವಾರ ಮಧ್ಯಾಹ್ನ ತಮ್ಮ ಸಹೋದರ ಮತ್ತು ಸಹೋದರಿಯೊಂದಿಗೆ ಲೂಡೋ ಆಟ ಆಡುತ್ತಿದ್ದ ಸಂದರ್ಭದಲ್ಲಿ, ತನುಷ್ಕಾ ಆಟದ ಕಾಯಿನ್'ನ್ನು ಆಕಸ್ಮಿಕವಾಗಿ ನುಂಗಿದ್ದಾಳೆ. ಈ ವೇಳೆ ಉಸಿರುಗಟ್ಟಿದ್ದು, ಕೂಡಲೇ ಬಾಲಕಿಯನ್ನು ತಾಯಿ ಮತ್ತು ನೆರೆಯವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ, ಬಾಲಕಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿಯನ್ನು ಮೃತಪಟ್ಟಿದ್ದಾಳೆ.

ತನುಷ್ಕಾ ಅವರ ತಾಯಿ ಉಲ್ಲಾಳದ ಒಂದು ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲಸದ ಸ್ಥಳದ ಸಮೀಪ ಬಾಡಿಗೆ ಮನೆಯಲ್ಲಿ ಕುಟುಂಬ ವಾಸವಿತ್ತು.

ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಲೂಡೋ ಕಾಯಿನ್ ಪತ್ತೆಯಾಗಿದ್ದು, ಅದರಿಂದಲೇ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆಂದು ತಿಳಿದುಬಂದಿದೆ.

ಈ ಸಂಬಂಧ ಉಲ್ಲಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.