2.7 ಲಕ್ಷ ಖಾಲಿ ಹುದ್ದೆಗಳನ್ನುಶೀಘ್ರವೇ ಭರ್ತಿ ಮಾಡಿ: ಧಾರವಾಡದಲ್ಲಿ ಬೀದಿಗಿಳಿದು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ; Video
ಉದ್ಯೋಗಾಕಾಂಕ್ಷಿಗಳು ತಮ್ಮ ವೈಯಕ್ತಿಕ ಸಂಕಷ್ಟಗಳನ್ನು ಹಂಚಿಕೊಂಡರು. ಒಬ್ಬರು ಪರೀಕ್ಷೆಗಳಿಗಾಗಿ ಕುಟುಂಬವನ್ನೇ ಬಿಟ್ಟು ಓದಿದ್ದೇನೆ, ಆದರೆ ಪರೀಕ್ಷೆಗಳೇ ನಡೆದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಧಾರವಾಡ: ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ ಮತ್ತು ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಸಾವಿರಾರು ಮಂದಿ ಧಾರವಾಡದಲ್ಲಿ ಮೆರವಣಿಗೆ ನಡೆಸಿ, ಶಿಕ್ಷಣ, ಪೊಲೀಸ್ ಮತ್ತು ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ 2.7 ಲಕ್ಷ ಖಾಲಿ ಹುದ್ದೆಗಳನ್ನು ರಾಜ್ಯ ಸರ್ಕಾರ ಭರ್ತಿ ಮಾಡಬೇಕೆಂದು ಆಗ್ರಹಿಸಿದರು.
ಉದ್ಯೋಗಾಕಾಂಕ್ಷಿಗಳು ತಮ್ಮ ವೈಯಕ್ತಿಕ ಸಂಕಷ್ಟಗಳನ್ನು ಹಂಚಿಕೊಂಡರು. ಒಬ್ಬರು ಪರೀಕ್ಷೆಗಳಿಗಾಗಿ ಕುಟುಂಬವನ್ನೇ ಬಿಟ್ಟು ಓದಿದ್ದೇನೆ, ಆದರೆ ಪರೀಕ್ಷೆಗಳೇ ನಡೆದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈ ಪ್ರತಿಭಟನೆಯ ಆಯೋಜಕರಾದ ಕಂಠಕುಮಾರ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಏನು ಮಾಡಿತು ಎಂಬುದನ್ನು ಪ್ರಶ್ನಿಸಿದರು. ಖಾಸಗಿ ವಲಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಿರುವುದನ್ನು ಉಲ್ಲೇಖಿಸಿದರು. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಪ್ರಮುಖ ನೇಮಕಾತಿಗಳು ನಡೆದಿಲ್ಲ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಘೋಷಣೆ ಕೂಗಿರುವ ಪ್ರತಿಭಟನಾಕಾರರು, ಕಾಂಗ್ರೆಸ್ ನಾಯಕರ ಫೋಟೋ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಧಾರವಾಡ ಪೊಲೀಸರ ಹರಸಾಹಸ ಪಟ್ಟ ಪ್ರಸಂಗವೂ ನಡೆದದೆ.
ಇನ್ನು ಇಂದು ಪ್ರತಿಭಟನೆಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ(AKSA) ಅನುಮತಿ ಕೇಳಿದ್ದು, ಪೊಲೀಸರು ನಿರಾಕರಿಸಿದ್ದರು. ಆದರೆ ಸಂಘಟನೆ ಹೈಕೋರ್ಟ್ ಮೊರೆ ಹೋಗಿದ್ದು, ಕೋರ್ಟ್ ಪೊಲೀಸರೊಂದಿಗೇ ಈ ಬಗ್ಗೆ ಚರ್ಚಿಸಿ ಎಂದು ತಿಳಿಸಿ ವಿಚಾರಣೆಯನ್ನು ಮಾರ್ಚ್ 3ಕ್ಕೆ ಮುಂದೂಡಿತ್ತು. ಈ ನಡುವೆ ಇಂದು ಬಿಜೆಪಿ ಹೋರಾಟಕ್ಕೆ ಪೊಲೀಸರು ಗ್ರೀನ್ ಸಿಗ್ನಲ್ ನೀಡಿರು ಹಿನ್ನೆಲೆ ಅನುಮತಿ ಇಲ್ಲದಿದ್ದರೂ ಯುವಕರು ಬೀದಿಗೆ ಇಳಿದಿದ್ದಾರೆ. ಜಯನಗರ ವೃತ್ತದ ಕಡೆಗೆ ಹೋಗುತ್ತಿದ್ದ ಪ್ರತಿಭಟನಾಕಾರರನ್ನು ಶ್ರೀನಗರ ವೃತ್ತದ ಬಳಿಯೇ ಪೊಲೀಸರು ತಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


