ರಾಜ್ಯ

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಫೆಬ್ರವರಿ 11 ರಂದು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ನಿರ್ದೇಶಕರ ಅಪಹರಣ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ
ನಟಿ ಐಶ್ವರ್ಯ ಹಾಗೂ ಅನೀಶ್
Published On :

ಬೆಂಗಳೂರು: ಕನ್ನಡ ಸಿನಿಮಾ ನಿರ್ದೇಶಕರೊಬ್ಬರನ್ನು ಅಪಹರಿಸಿ, ಹಲ್ಲೆ ಮಾಡಿ, ಚಿನ್ನಾಭರಣ ಮತ್ತು ನಗದು ದೋಚಿರುವ ಆರೋಪದ ಮೇಲೆ ನಟಿ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಫೆಬ್ರವರಿ 11 ರಂದು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ನಿರ್ದೇಶಕರ ಅಪಹರಣ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಆರೋಪಿಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಭಾವಿಯೂ ಆಗಿರುವ ಮತ್ತು ಭೀಮಾ ಚಿತ್ರದಲ್ಲಿ ಅಭಿನಯಿಸಿದ್ದ ಐಶ್ವರ್ಯ ಎಂಬ ನಟಿಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಇನ್ನೂ ಬಿಡುಗಡೆಯಾಗದ 'ಜೀವನದ ಭಾಷೆ' ಎಂಬ ಹೊಸ ಚಿತ್ರವನ್ನು ನಿರ್ದೇಶಿಸಿರುವ ಟಿಎ ಅನೀಶ್ ಅವರನ್ನು ಅಪಹರಣ ಮಾಡಲಾಗಿತ್ತು. ಇವರು ತಮ್ಮ ಕಾರು ಮಾರಾಟ ಮಾಡಲು ನಿರ್ಧರಿಸಿದ್ದರು. ಈ ಬಗ್ಗೆ ಇಂದಿರಾನಗರ ಬಳಿ ನೆಲೆಸಿರುವ ಸ್ನೇಹಿತೆ ಹಾಗೂ ನಟಿ ಐಶ್ವರ್ಯ ಅವರಿಗೆ ಮಾಹಿತಿ ನೀಡಿದ್ದರು. ನಂತರ ಆ ನಟಿಯಿಂದ ಅಪಹರಣಕಾರರು ಮಾಹಿತಿ ಪಡೆದುಕೊಂಡಿದ್ದರು.

ನಂತರ ಆರೋಪಿಗಳು ವಾಹನ ಮಾರಾಟ ಮಾಡಲು ಸಹಾಯ ಮಾಡುವುದಾಗಿ ದೂರುದಾರ ನಿರ್ದೇಶಕರಿಗೆ ತಿಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಂತರ ಫೆಬ್ರವರಿ 9 ರಂದು ಮುಂಬೈನಲ್ಲಿದ್ದ ನಿರ್ದೇಶಕನನ್ನ ಪ್ಲ್ಯಾನ್‌ ಮಾಡಿ ಕಿಡ್ನ್ಯಾಪರ್ಸ್ ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಬಳಿಕ ನಿರ್ದೇಶಕನನ್ನ ಅಪಹರಿಸಿ ಬ್ಯಾಡರಹಳ್ಳಿಯ ಮನೆಯೊಂದಕ್ಕೆ ಕರೆದುಕೊಂಡು ಬಂದಿದ್ದಾರೆ. ಅಲ್ಲಿ ಹಾಕಿ ಸ್ಟಿಕ್, ಇನ್ನಿತರ ವಸ್ತುಗಳಿಂದ ಹಲ್ಲೆ ಮಾಡಿದ್ದಾರೆ ಮತ್ತು ಅವರು ಧರಿಸಿದ್ದ ಚಿನ್ನಾಭರಣ ಹಾಗೂ 30,000 ರೂ.ನಗದು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ, ಅವರನ್ನು ಕಾರಿನಲ್ಲಿ ತುಮಕೂರು ಜಿಲ್ಲೆಯ ಪಂಡಿತನಹಳ್ಳಿ ಬಳಿಯ ಮಂದಾರಗಿರಿ ಬೆಟ್ಟಕ್ಕೆ ಕರೆದೊಯ್ದ, ಅಲ್ಲಿ ಇನ್ನೂ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಮತ್ತೆ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ದೂರಿನ ಆಧಾರದ ಮೇಲೆ, ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಅಪಹರಣ ಮತ್ತು ಹಲ್ಲೆ ಪ್ರಕರಣ ದಾಖಲಾಗಿದ್ದು, ಒಬ್ಬ ಮಹಿಳೆ ಸೇರಿದಂತೆ ಒಟ್ಟು 11 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳಿಂದ ಅಪರಾಧಕ್ಕೆ ಬಳಸಲಾದ ಆರು ಮೊಬೈಲ್ ಫೋನ್‌ಗಳು, ಚಿನ್ನಾಭರಣಗಳು, ಒಂದು ಕಾರು ಮತ್ತು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.