ರಾಜ್ಯ

ಸಿಎಂ-ಡಿಸಿಎಂ ನಡುವಿನ 'ಕುರ್ಚಿ ಕದನ'ದಿಂದ ಜನರ ಸಮಸ್ಯೆ ಕೇಳಲು ಅವರಿಗೆ ಸಮಯವೇ ಇಲ್ಲ, ಸರ್ಕಾರಿ ಹುದ್ದೆ ಭರ್ತಿ ಮಾಡುವ ಭರವಸೆ ಈಡೇರಿಸಿಲ್ಲ: ಬಿ.ವೈ ವಿಜಯೇಂದ್ರ

ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲಾ ಖಾಲಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ತಮ್ಮ ಚುನಾವಣಾಪೂರ್ವ ಭರವಸೆ ನೀಡಿದ್ದರು.

ಸಿಎಂ-ಡಿಸಿಎಂ ನಡುವಿನ 'ಕುರ್ಚಿ ಕದನ'ದಿಂದ ಜನರ ಸಮಸ್ಯೆ ಕೇಳಲು ಅವರಿಗೆ ಸಮಯವೇ ಇಲ್ಲ, ಸರ್ಕಾರಿ ಹುದ್ದೆ ಭರ್ತಿ ಮಾಡುವ ಭರವಸೆ ಈಡೇರಿಸಿಲ್ಲ: ಬಿ.ವೈ ವಿಜಯೇಂದ್ರ
ಬಿ ವೈ ವಿಜಯೇಂದ್ರ
Published On :

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಇಲಾಖೆಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಚುನಾವಣಾ ಭರವಸೆಯನ್ನು ಪಾಲಿಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತೀವ್ರವಾಗಿ ಟೀಕಿಸಿದರು.

ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲಾ ಖಾಲಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ತಮ್ಮ ಚುನಾವಣಾಪೂರ್ವ ಭರವಸೆ ನೀಡಿದ್ದರು.

ರಾಹುಲ್ ಗಾಂಧಿ ಅವರು ಬೆಳಗಾವಿಗೆ ಬಂದಾಗ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 2.5 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಹೇಳಿದ್ದರು. ಆದರೆ ಮುಖ್ಯಮಂತ್ರಿ ಎಲ್ಲವನ್ನೂ ಮರೆತಂತಿದ್ದಾರೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವಿನ ‘ಕುರ್ಚಿ ಯುದ್ಧ’ದಿಂದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವರಿಗೆ ಸಮಯವೇ ಇಲ್ಲ ಎಂದರು.

ಧಾರವಾಡ ಸೇರಿದಂತೆ ಬೆಂಗಳೂರು, ವಿಜಯಪುರ, ಬಾಗಲಕೋಟೆ, ಬೀದರ್ ಮುಂತಾದ ಕಡೆಗಳಲ್ಲಿ ನಡೆದ ಪ್ರತಿಭಟನೆಗಳನ್ನು ಉಲ್ಲೇಖಿಸಿದ ಅವರು, ಸರ್ಕಾರ ಕುಂಭಕರ್ಣನ ನಿದ್ರೆಯಲ್ಲಿ ಮುಳುಗಿದಂತಿದೆ, ಉದ್ಯೋಗ ಸೃಷ್ಟಿಸುವ ಮನೋಬಲವೇ ಇಲ್ಲ ಎಂದು ಕಿಡಿಕಾರಿದರು.

ಪ್ರತಿಭಟನೆಗಳ ನಡುವೆಯೂ ಅವರು ಇದರ ಬಗ್ಗೆ ಒಂದೇ ಮಾತನ್ನೂ ಆಡಿಲ್ಲ ಎಂದರು. ಎಲ್ಲ ಸಮಸ್ಯೆಗಳಿಗೂ ಹಿಂದಿನ ಬಿಜೆಪಿ ಸರ್ಕಾರವನ್ನೇ ದೋಷಾರೋಪಣೆ ಮಾಡುವುದು ಸರ್ಕಾರದ ಪ್ರವೃತ್ತಿಯಾಗಿದೆ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.